Kodagu

ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ

admincoorgdaily

ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ  ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ

ಬೆಂಗಳೂರು ‌;ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ವಾರ್ತಾಭಾರತಿ ವಿಶೇಷ ವರದಿಗಾರ ಹಾಗೂ ಶಕ್ತಿ ದಿನ‌ ಪತ್ರಿಕೆಯ ವರದಿಗಾರ ಕೆ.ಎಂ ಇಸ್ಮಾಯಿಲ್ ಕಂಡಕರೆ ಅವರು ಭಾಜನರಾಗಿದ್ದಾರೆ.ಜಿ.ನಾರಾಯಣಸ್ವಾಮಿ (ಅತ್ಯುತ್ತಮ ಗ್ರಾಮಾಂತರ ವರದಿಗೆ ಪ್ರಶಸ್ತಿ) ಲಭಿಸಿದೆ.

 ಬೀದರ್ ನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.