ಕೊಡವ ಸಂಸ್ಕೃತಿ, ಭಾಷೆ ಹಾಗೂ ಪರಂಪರೆಯನ್ನು ಪೋಷಿಸಿ ಉಳಿಸಿಕೊಂಡು ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ:ಶಾಸಕ ಎ.ಎಸ್ ಪೊನ್ನಣ್ಣ

ಬೆಂಗಳೂರಿನ ಕೊಡವ ಸಮಾಜ ಆವರಣದಲ್ಲಿ, ಕೊಡವ ಸಮಾಜ ಬೆಂಗಳೂರು ಆಯೋಜಿಸಿದ ಕೈಲ್ ಪೊಳ್ದ್ ನಮ್ಮೆರ ಒತ್ತೊರ್ಮೆ ಕೂಟ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭಾಗವಹಿಸಿದರು.
ಕೊಡವ ಸಮಾಜದವರಿಂದ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಕೊಡವ ಸಂಸ್ಕೃತಿ, ಭಾಷೆ ಹಾಗೂ ಪರಂಪರೆಯನ್ನು ಪೋಷಿಸಿ ಉಳಿಸಿಕೊಂಡು ಬೆಳೆಸುವ ಜವಾಬ್ದಾರಿ ಇಂದು ನಮ್ಮೆಲ್ಲರ ಮೇಲಿದೆ. ಅದರಲ್ಲೂ ಯುವ ಜನಾಂಗದವರು ನಮ್ಮ ಸಂಸ್ಕೃತಿ, ಭಾಷೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಿ ಮುಂದಿನ ತಲೆಮಾರಿಗೆ ನಮ್ಮ ವಿಶಿಷ್ಟ ಸಂಸ್ಕೃತಿಯನ್ನು ಮನವರಿಕೆ ಮಾಡಿ ಬೆಳೆಸುವಂತಹ ಗುರುತರ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬೆಂಗಳೂರು ಕೊಡವ ಸಮಾಜ ಅಧ್ಯಕ್ಷರಾದ ಕರವಟ್ಟಿರ ಟಿ ಪೆಮ್ಮಯ್ಯ, ಶ್ರೀ ತೀತಿರ ರೋಷನ್ ಅಪ್ಪಚ್ಚು(ಚೀಫ್ ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್ ) ಆಡಳಿತ ಮಂಡಳಿಯವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.