ಗ್ರಾಮೀಣ ಆಟಗಳನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ:ಶಾಸಕ ಎಎಸ್ ಪೊನ್ನಣ್ಣ

Feb 13, 2026 - 09:41
 0  91
ಗ್ರಾಮೀಣ ಆಟಗಳನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ:ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ;ಕೊಡಗು ಜಾನಪದ ಪರಿಷತ್ ಆಯೋಜಿಸಿದ ಗ್ರಾಮೀಣ ಕ್ರೀಡಾಕೂಟದ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಈ ಕ್ರೀಡಾಕೂಟವು ಆಯೋಜನೆಗೊಂಡಿತ್ತು.

ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಕೊಡಗು ಜಾನಪದ ಪರಿಷತ್ ರವರು ಅತ್ಯಂತ ಪ್ರಮುಖವಾದ ಈ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಿರುವುದು ಸಂತೋಷ ತಂದಿದೆ. ಈ ಕ್ರೀಡಾಕೂಟವು ಪ್ರಾಮುಖ್ಯತೆ ಪಡೆದುಕೊಳ್ಳಲು ಮುಖ್ಯ ಕಾರಣವೆಂದರೆ, ನಮ್ಮ ಭಾಗದ ಗ್ರಾಮೀಣ ಆಟಗಳನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಇದನ್ನು ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ.

 ಆಧುನಿಕ ಬದುಕಿನಲ್ಲಿ ನಮ್ಮ ಗ್ರಾಮೀಣ ಕ್ರೀಡಾಕೂಟಗಳು ಹಾಗೂ ಅದರ ಪ್ರಾಮುಖ್ಯತೆ ಅಳಿಸಿ ಹೋಗಬಾರದು. ಈ ನಿಟ್ಟಿನಲ್ಲಿ ಈ ಕ್ರೀಡೆಯ ಪ್ರೋತ್ಸಾಹಕ್ಕೆ ವೇದಿಕೆ ಕಲ್ಪಿಸಿಕೊಟ್ಟ ಕೊಡಗು ಜಾನಪದ ಪರಿಷತ್ ನವರಿಗೂ ಹಾಗೂ ಈ ಕ್ರೀಡಾಕೂಟಕ್ಕೆ ಮೆರುಗು ತಂದ ಎಲ್ಲಾ ಸ್ಪರ್ಧಾಳುಗಳಿಗೆ ಮತ್ತು ಪ್ರೇಕ್ಷಕರಿಗೆ ಧನ್ಯವಾದಗಳು ಎಂದು ತಿಳಿಸಿದರು. ಪಂದ್ಯಕೂಟಕ್ಕೆ ಶುಭ ಕೋರುತ್ತಾ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಇಂತಹ ಗ್ರಾಮೀಣ ಕ್ರೀಡಾಕೂಟಗಳು ನಡೆದು ಯಶಸ್ವಿಯಾಗಲಿ ಎಂದು ಹಾರೈಸಿದರು.

ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಅನಂತ ಶಯನ, ಪುರಸಭೆ ನಿಕಟ್ಟಪೂರ್ವ ಅಧ್ಯಕ್ಷರು ದೇಚಮ್ಮ ಕಾಳಪ್ಪ, ಕನ್ನಡ ಸಾಹಿತ್ಯ ಅಧ್ಯಕ್ಷರು ಕೇಶವ ಕಾಮತ್, ಕನ್ನಡ ಸಾಹಿತ್ಯ ನಿಕಟಪೂರ್ವ ಅಧ್ಯಕ್ಷರು ಲೋಕೇಶ್ ಸಾಗರ್, ಬಗರ್ ಹುಕುಂ ಅಧ್ಯಕ್ಷರು ಸಲಾಂ, ಕುಂಡಚ್ಚಿರ ಮಂಜು ದೇವಯ್ಯ, ಮಾದೇವ, ಸದಸ್ಯರು ಪದಾಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0