ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆ ಅರ್ಹತೆ ಪಡೆದ ಇಟಲಿ

ದುಬೈ: ಮುಂದಿನ ವರ್ಷ ನಡೆಯಲಿರುವ ಪುರುಷರ ಟ್ವೆಂಟಿ-20 ವಿಶ್ವಕಪ್‌ಗೆ ಅರ್ಹತೆ ಪಡೆದುಕೊಳ್ಳುವ ಮೂಲಕ ಇಟಲಿ ಕ್ರಿಕೆಟ್ ತಂಡವು ಇತಿಹಾಸ ಸೃಷ್ಟಿಸಿದೆ. ಐಸಿಸಿ ಪುರುಷರ ಟಿ20 ವಿಶ್ವಕಪ್ ನ ಯುರೋಪ್ ಅರ್ಹತಾ ಪಂದ್ಯಾವಳಿಯಲ್ಲಿ, ಗುರುವಾರ ಹೇಗ್ ನಲ್ಲಿ ನೆದರ್ ಲ್ಯಾಂಡ್ಸ್ ವಿರುದ್ಧ ನಡೆದ ತನ್ನ ಕೊನೆಯ ಪಂದ್ಯದಲ್ಲಿ ಇಟಲಿ ಸೋತಿತಾದರೂ, ನೆಟ್ ರನ್ ರೇಟ್ ಆಧಾರದಲ್ಲಿ ವಿಶ್ವಕಪ್ ಗೆ ತೇರ್ಗಡೆ ಹೊಂದಿತು. ಮುಂದಿನ ವರ್ಷ ಟಿ20 ವಿಶ್ವಕಪ್ ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿದೆ.