ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿ ಮಾಡಿದ ಜೆಡಿಎಸ್ ಜಿಲ್ಲಾ SC-ST ಘಟಕ
ಮಡಿಕೇರಿ:ಸತ್ಯನಾರಾಯಣ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆಗೆ ನೆಲ್ಲಿಹುದಿಕೇರಿಗೆ ಆಗಮಿಸಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್ ರವರನ್ನು ಕುಶಾಲನಗರ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷರು, ಕೊಡಗು ಜೆಡಿಎಸ್ ಸಾಮಾಜಿಕ ಜಾಲತಾಣ ಉಪಾಧ್ಯಕ್ಷರು, ಗ್ರಾಮ ಸಮಿತಿ ಅಧ್ಯಕ್ಷರಾದ ಶಿಯಾಬುದ್ದೀನ್ ವಿ.ಪಿ.ಎಸ್., ಜೆಡಿಎಸ್ ಕೊಡಗು ಎಸ್ಸಿ-ಎಸ್ಟಿ ಘಟಕದ ಜಿಲ್ಲಾಧ್ಯಕ್ಷೆ ಜಯಮ್ಮ ಅಮ್ಮತ್ತಿ , ಅವರುಭೇಟಿ ಮಾಡಿ,ಕೊಡಗು ಜಿಲ್ಲೆಯ ನೆಟ್ವರ್ಕ್ ಸಮಸ್ಯೆಯನ್ನು ಪರಿಹರಿಸಲು, ಹಾಗೂ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ಅಮ್ಮತ್ತಿ ಗ್ರಾಮ ವ್ಯಾಪ್ತಿಯ ರಸ್ತೆಯನ್ನು ಸರಿಪಡಿಸಲು, ಬಡ ನಿರಾಶ್ರಿತರಿಗೆ ನಿವೇಶನ, ಒದಗಿಸಲು ಸಂಸದರಲ್ಲಿ ಮನವಿ ಮಾಡಿದರು.ಮನವಿಗೆ ಸ್ಪಂದಿಸಿದ ಸಂಸದರು ಕೂಡಲೇ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದ್ದಾರೆ.