ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಲಜಾ ಶೇಖರ್ ಆಯ್ಕೆ

Jan 11, 2026 - 15:53
 0  326
ಸೋಮವಾರಪೇಟೆ ತಾಲೂಕು  ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ  ಜಲಜಾ ಶೇಖರ್ ಆಯ್ಕೆ

ಸೋಮವಾರಪೇಟೆ' ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 09.02.2026 ರಂದು ಐಗೂರು ಗ್ರಾಮದಲ್ಲಿ ನಡೆಯಲಿದೆ. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸೋಮವಾರಪೇಟೆಯ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆಯಾಗಿದ್ದಾರೆ. ಅಧ್ಯಾಪಕರಾಗಿ, ಮುಖ್ಯೋಪಾಧ್ಯಾಯರಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಶ್ರೀಮತಿ ಜಲಜಾ ಶೇಖರ್ ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಕೃಷಿ ಮಾಡಿದ್ದಾರೆ. ಇಲ್ಲಿಯವರೆಗೆ ಏಳು ಪುಸ್ತಕಗಳನ್ನು ಇವರು ಹೊರತಂದಿದ್ದು ಇವರ ಎಂಟನೆಯ ಪುಸ್ತಕವು ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಳ್ಳಲಿದೆ. ವಿಚಾರದೆಡೆಗೆ, ನೆಲಮುಗಿಲು, ಅಗ್ನಿಕುಂಡ, ಪ್ರತಿಕ್ಷ, ವಿಲೋಕನ ವೈಚಾರಿಕ ಲೇಖನಗಳು, ದೂರ ತೀರ ಯಾನ ಪ್ರವಾಸ ಕಥನ, ಕನ್ನಡಿಯ ಬಿಂಬ ಕೃತಿಗಳನ್ನು ರಚಿಸಿದ್ದಾರೆ. 

        ಶೈಕ್ಷಣಿಕ, ಸಾಹಿತ್ಯ ಅಲ್ಲದೆ ಸಾಮಾಜಿಕ ಮತ್ತು ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು ಸೋಮವಾರಪೇಟೆಯ ಅಕ್ಕನ ಬಳಗದ ಅಧ್ಯಕ್ಷರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೊಡಗು ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವಾರು ಸಾಹಿತ್ಯ ಸಮ್ಮೇಳನಗಳಲ್ಲಿ ವಿಚಾರ ಮಂಡನೆ, ಕವಿಗೋಷ್ಠಿ ಗಳಲ್ಲಿ ಭಾಗವಹಿಸಿ ಸನ್ಮಾನವನ್ನು ಪಡೆದುಕೊಂಡಿದ್ದಾರೆ.

      ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸೋಮವಾರಪೇಟೆ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಿಲ್ಲಾ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0