ಚಿನ್ನಾಭರಣ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಿನ್ನಾಭರಣ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಡಿಕೇರಿ:ದಿನಾಂಕ: 05-11-2025 ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಎಂ.ಚೆಂಬು ಗ್ರಾಮದ ನಿವಾಸಿ  ವೀರಪ್ಪ ಪಿ.ಪಿ. ರವರ ಮನೆಯಲ್ಲಿ ಯಾರು ಇಲ್ಲದಿರುವ ಸಂದರ್ಭ ರೂಮಿನಲ್ಲಿದ್ದ ಗಾದ್ರೇಜ್‌ನ ಸಣ್ಣ ಕ್ಯಾಶ್ ಲಾಕರ್‌ನಲ್ಲಿ ಇಟ್ಟಿದ್ದ ಅಂದಾಜು ರೂ. 15,000/- ನಗದು ಮತ್ತು 120 ಗ್ರಾಂ ತೂಕದ ಚಿನ್ನಾಭರಣಗಳು ಕಳ್ಳತನವಾಗಿರುವ ಕುರಿತು ದೂರು ಸ್ವೀಕರಿಸಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಸದರಿ ಪ್ರಕರಣದ ಆರೋಪಿಗಳ ಪತ್ತೆಗಾಗಿ  ಸೂರಜ್.ಪಿ.ಎ, ಡಿಎಸ್‌ಪಿ, ಮಡಿಕೇರಿ ಉಪವಿಭಾಗ, ಚಂದ್ರಶೇಖರ್.ಹೆಚ್.ವಿ. ಪಿಐ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ,  ಮಂಜುನಾಥ್.ಈ. ಪಿಎಸ್‌ಐ ಸಿದ್ದಾಪುರ ಪೊಲೀಸ್ ಠಾಣೆ ಮತ್ತು ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು & ತಾಂತ್ರಿಕ ಸಿಬ್ಬಂಗಳು ಒಳಗೊಂಡಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 10-11-2025 ರಂದು ಶಿವಮೊಗ್ಗ ಜಿಲ್ಲೆ, ಭದ್ರವಾತಿ ತಾ। ಸಿದ್ದಾಪುರ ಗ್ರಾಮದ ನಿವಾಸಿಗಳಾದ 1) ಸಿದ್ದಲಿಂಗು ಎನ್, (28 ವರ್ಷ) ಮತ್ತು 2) ರಘು.ಎನ್, (26 ವರ್ಷ) ಎಂಬುವವರನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ ರೂ.8.50,000/- ನಗದು ಮತ್ತು 120 ಗ್ರಾಂ ತೂಕದ ಚಿನ್ನವನ್ನು ವರಪಡಿಸಿಕೊಳ್ಳಲಾಗಿರುತ್ತದೆ.