ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ: ಶಾಸಕ ಎ.ಎಸ್. ಪೊನ್ನಣ್ಣ ಕರೆ

Jun 28, 2026 - 09:22
 0  177
ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ: ಶಾಸಕ ಎ.ಎಸ್. ಪೊನ್ನಣ್ಣ ಕರೆ

ವಿರಾಜಪೇಟೆ:"ಪೋಲಿಯೋ ಮುಕ್ತ ಭಾರತವನ್ನು ನಿರ್ಮಿಸುವುದು ನಮ್ಮೆಲ್ಲರ ಗುರಿಯಾಗಿದೆ. ಈ ನಿಟ್ಟಿನಲ್ಲಿ ಐದು ವರ್ಷದ ಒಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ಹಾಕಿಸುವುದು ಅತ್ಯಗತ್ಯ" ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಹೇಳಿದರು.

ವಿರಾಜಪೇಟೆಯಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಮಟ್ಟದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ವೇಳೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಶಾಸಕರು, "ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ. ನಿಗದಿಪಡಿಸಿದ ಗುರಿಯನ್ನು ಶೇ. 100ರಷ್ಟು ಸಾಧಿಸುವ ಮೂಲಕ ಕ್ಷೇತ್ರವನ್ನು ಸಂಪೂರ್ಣ ಪೋಲಿಯೋ ಮುಕ್ತವನ್ನಾಗಿಸಬೇಕು," ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪ್ರವೀಣ್, ತಾಲ್ಲೂಕು ವೈದ್ಯಾಧಿಕಾರಿ ಡಾ. ಯತೀರಾಜ್, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಮಾಜಿ ಪುರ ಸಭೆ ಸದಸ್ಯರು ರಾಜೇಶ್ ಪದ್ಮನಾಭ, ರಜಿನಿಕಾಂತ್, ಅನಿತಾ, ಪಕ್ಷದ ಮುಖಂಡರು ಅಜ್ಜಿಕುಟ್ಟಿರ ಪೊನ್ನು, ಬಟ್ಟಕಾಳಂಡ ರಾಜ, ವರ್ಗಿಸ್, ಜಾಫರ್,ಫಾತಿಮಾ, ಆರೋಗ್ಯ ಇಲಾಖೆಯ ಸಿಬ್ಬಂದಿ, ಆರೋಗ್ಯ ಸಹಾಯಕರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0