ಚೆನ್ನಯ್ಯನಕೋಟೆ ಗ್ರಾ.ಪಂ ಭೇಟಿ ನೀಡಿದ,ಜಂಟಿ ನಿರ್ದೇಶಕರು
ಮಡಿಕೇರಿ : ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಗ್ರಾ.ಪಂ.ಗೆ ಗ್ರಾಮೀಣಾಭಿವೃದ್ದಿ ಆಯುಕ್ತಾಲಯದ ಜಂಟಿ ನಿರ್ದೇಶಕರಾದ ಅನಿತಾರವರು ಭೇಟಿ ನೀಡಿದರು.
ಹಿರಿಯ ಅಧಿಕಾರಿಗಳಿಂದ ಗ್ರಾಮ ಪಂಚಾಯಿತಿಗಳನ್ನು ದತ್ತು ಪಡೆದು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾಯಕ ಗ್ರಾಮ ಕಾರ್ಯಕ್ರಮ ಅಂಗವಾಗಿ ದತ್ತುಪಡೆಯಲು ಇವರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸರ್ಕಾರದ ವಿವಿಧ ಯೋಜನೆಗಳಡಿ ಅಭಿವೃದ್ದಿಪಡಿಸಲಾದ ಕಾಮಗಾರಿಗಳನ್ನು ಪರಿಶೀಲಿಸಿದರು. ನಂತರ ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿಗೆ ಒಳಪಡುವ ಚೆನ್ನಂಗಿ ಆಶ್ರಮ ಶಾಲೆಗೆ ಭೇಟಿ ನೀಡಿ ಆಶ್ರಮ ಶಾಲೆಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದರು.
ಆಶ್ರಮ ಶಾಲೆಯಲ್ಲಿ ವಿಧ್ಯಾಭ್ಯಾಸ ಮಾಡುತ್ತಿರುವ ಹೆಣ್ಣು ಮಕ್ಕಳ ಕುಶಲೋಪರಿಯನ್ನು ವಿಚಾರಿಸಿದರು.
ಕಾಯಕ ಗ್ರಾಮದ ಉದ್ದೇಶ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ವಿಭಾಗವು ಸಿದ್ಧಪಡಿಸಿರುವ Gram Panchayat Performance Ranking ನಲ್ಲಿ ಹಿಂದುಳಿದಿರುವ ಗ್ರಾಮ ಪಂಚಾಯಿತಿಗಳನ್ನು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳು ಆಯ್ಕೆ ಮಾಡಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಗ್ರಾಮ ಪಂಚಾಯಿತಿ ಕಾರ್ಯನಿರ್ವಹಣೆ, ನಿಯಮಿತವಾಗಿ ವಿವಿಧ ಸಭೆಗಳ ಆಯೋಜನೆ, ತೆರಿಗೆ ವಸೂಲಾತಿ ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿಗೊಳಿಸುವುದು ಕಾರ್ಯಕ್ರಮದ ಉದ್ದೇಶವಾಗಿರುತ್ತದೆ ಇದೇ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಾದ ಪ್ರಕಾಶ್, ನರೇಗಾ ತಾಲ್ಲೂಕು ಸಂಯೋಜಕರಾದ ನರೇಂದ್ರ, ತಾಲ್ಲೂಕು ಎಂ.ಐ.ಎಸ್.ಸಂಯೋಜಕರಾದ ಕಾರ್ತೀಕ್ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
