ಡಿ. 16 ರಂದು ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

ಡಿ. 16 ರಂದು ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

ಡಿ. 16 ರಂದು ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ ಮಡಿಕೇರಿ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿ ಅಸ್ತಿತ್ವಕ್ಕೆ ಬಂದಿರುವ ಪತ್ರಕರ್ತರ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ ಡಿ. 16 ರಂದು ಕುಶಾಲನಗರ ಬಳಿಯ ಹುಣಸೆವಾಡಿ ಸರ್ಕಲ್‌ನಲ್ಲಿರುವ ಕೂರ್ಗ್ ವಾಟರ್ ಪಾರ್ಕ್ ನಲ್ಲಿ ಆಯೋಜಿತವಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ತಿಳಿಸಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸಲಿದ್ದಾರೆ.

ಸಾಂಸ್ಕೃತಿಕ ವೇದಿಕೆಗೆ ಬಿಗ್‌ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಹಾಗೂ ಹಾಸ್ಯ ನಟ ತುಕಾಲಿ ಸಂತೋಷ್ ಚಾಲನೆ ನೀಡಲಿದ್ದು, ಹಿರಿಯ ಪತ್ರಕರ್ತ ರವಿ ಟೆಲೆಕ್ಸ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೂರ್ಗ್ ವಾಟರ್ ಪಾರ್ಕ್ ಮಾಲೀಕರಾದ ಲಕ್ಷ್ಮೀ ನಾರಾಯಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ನಿರ್ದೇಶಕಿ ಬಿ.ಆರ್. ಸವಿತಾ ರೈ, ರಾಷ್ಟ್ರೀಯ ಸಮಿತಿ ಸದಸ್ಯ ಪಳೆಯಂಡ ಪಾರ್ಥ ಚಿಣ್ಣಪ್ಪ, ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಸಂಚಾಲಕ ಟಿ.ಆರ್. ಪ್ರಭುದೇವ್ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಹಾಗೂ ಸೋಮವಾರಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿಶ್ವ ಕುಮಾರ್ ಅವರುಗಳು ಪಾಲ್ಗೊಳ್ಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.