ಪತ್ರಕರ್ತರು ತಂತ್ರಜ್ಞಾನವನ್ನು ಬಳಸಿ ಪರಿಣಾಮಕಾರಿಯಾಗಿ ಕೆಲಸ ಮಾಡುವಂತಾಗಬೇಕು;ಅಜ್ಜಮಾಡ ರಮೇಶ್ ಕುಟ್ಟಪ್ಪ ; ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ
ವಿರಾಜಪೇಟೆ;ಬದಲಾದ ಕಾಲಘಟ್ಟದಲ್ಲಿ ಪತ್ರಕರ್ತರು ತಂತ್ರಜ್ಞಾನಗಳನ್ನು ಬಳಸಿಕೊಂಡು ಪರಿಣಾಮಕಾರಿಯಾಗಿ ಕೆಲಸ ಮಾಡುವಂತಾಗಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಾಗೂ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ವಿರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ಗೋಲ್ಡನ್ ಬೀನ್ ಹೋಂಸ್ಟೇಯಲ್ಲಿ ನಡೆದ ವಾರ್ಷಿಕ ಪ್ರಶಸ್ತಿ ಪ್ರದಾನ,ಹಾಗೂ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.
ಪತ್ರಕರ್ತರು ಸಮಾಜದಲ್ಲಿ ನಿರಂತರವಾಗಿ ಗುರುತಿಸಿಕೊಳ್ಳುವುದರ ಮೂಲಕ,ಸಮಾಜದಲ್ಲಿ ಎಲ್ಲಾ ರಂಗದಲ್ಲಿ ಪತ್ರಕರ್ತರ ಸೇವೆ ಮಾಡುತ್ತಿದ್ದಾರೆ.ಪ್ರಸ್ತುತ ದಿನಗಳಲ್ಲಿ ತಂತ್ರಜ್ಞಾನಗಳು ಬದಲಾಗುತ್ತಿದೆ.ಇದರ ಸದುಪಯೋಗವನ್ನು ಪತ್ರಕರ್ತರು ವೃತ್ತಿಯಲ್ಲಿ ಪಡೆದುಕೊಳ್ಳಬೇಕೆಂದು ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಸಲಹೆ ನೀಡಿದರು.
ಮುಂದುವರಿದು ಮಾತನಾಡಿದ ಅವರು,ಪ್ರಶಸ್ತಿ ಪಡೆದ ಪತ್ರಕರ್ತರ ಜವಬ್ದಾರಿ ಸಮಾಜದಲ್ಲಿ ಹೆಚ್ಚಿದೆ.ಜವಬ್ದಾರಿ ಅರಿತು ಸಮಾಜಕ್ಕೆ ಪತ್ರಕರ್ತ ಕೊಡುಗೆ ನೀಡಬೇಕಾಗಿದೆ.
ಕೊಡಗು ಜಿಲ್ಲೆಯಲ್ಲಿ ಪತ್ರಕರ್ತರ ಕ್ರೀಡಾ ಚಟುವಟಿಕೆಗಳ ಮೂಲಕ ಜಿಲ್ಲೆಯ ಪತ್ರಕರ್ತರು ಒಂದೇ ವೇದಿಕೆಯಡಿಯಲ್ಲಿ ಬರಲು ಸಾಧ್ಯವಾಯಿತು.ಪತ್ರಕರ್ತರ ಕಷ್ಟಕಗಳಿಗೆ ಸಂಘದ ಸದಾ ಬೆನ್ನೆಲುಬಾಗಿ ನಿಂತಿದೆ.ಇದೀಗ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದಿಂದ ಜಿಲ್ಲೆಯ ನಾಲ್ಕು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ತಲಾ 50 ಸಾವಿರ ನೋಡಿದ್ದೇವೆ.ವಿರಾಜಪೇಟೆ ತಾಲ್ಲೂಕು ಸಂಘಕ್ಕೆ 83 ಸಾವಿರ ರೂ ಕ್ಷೇಮಾಭಿವೃದ್ಧಿ ನಿಧಿಗೆ ನೀಡಿದ್ದೇವೆ ಎಂದು ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಹೇಳಿದರು.
ವಿರಾಜಪೇಟೆ ಸಮೀಪದ ಮಗ್ಗುಲ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವ್ಯವಸ್ಥಾಪಕಿ ಪೂಜಾ ಸಜೇಶ್ ಮಾತಾನಾಡಿ,ಪತ್ರಕರ್ತರೊಂದಿಗೆ ಕಳೆದ ಹಲವಾರು ವರ್ಷಗಳಿಂದ ಕುಟುಂಬ ಸದಸ್ಯರ ಭಾವನೆ ಇದೆ.ಕಳೆದ ಹಲವು ವರ್ಷಗಳಿಂದ ಪತ್ರಕರ್ತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ.ಪತ್ರಕರ್ತ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಉತ್ತಮ ಕಾರ್ಯಕ್ರಮವಾಗಿದ್ದು,ಮಕ್ಕಳಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಮತ್ತಷ್ಟು ಸಾಧನೆ ಮಾಡಲು ಉತ್ತಮ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಅನು ಕಾರ್ಯಪ್ಪ ಮಾತಾನಾಡಿ,ಪತ್ರಕರ್ತನಿಗೆ ಪ್ರಶಸ್ತಿ ಪ್ರೇರಕ ಶಕ್ತಿಯಾಗಿದೆ.ಒಬ್ಬ ಪತ್ರಕರ್ತನಿಗೆ ಮೊದಲ ಬಾರಿಗೆ ಪ್ರಶಸ್ತಿ ದೊರೆತಾಗ ಆಗುವಂತಹ ಸಂತೋಷವನ್ನು ವರ್ಣಿಸಲು ಪದಗಳೇ ಸಾಲದು.ಅದರೊಂದಿಗೆ ಪತ್ರಕರ್ತರ ಜವಬ್ದಾರಿ ಕೂಡ ಹೆಚ್ಚಲಿದೆ.ಬೇರೆ ಕಡೆಗಳಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಬಹಳ ಕಡಿಮೆ.ಆದರೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಾಧಕ ಪತ್ರಕರ್ತರ ಮಕ್ಕಳನ್ನು ಗುರುತಿಸಿ, ಪ್ರೋತ್ಸಾಹಿಸುವುದು ಮಕ್ಕಳ ನೆನಪಿನಲ್ಲಿ ಸದಾ ಉಳಿಯಲಿದೆ ಎಂದು ಅನು ಕಾರ್ಯಪ್ಪ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತಾನಾಡಿದ,ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರೆಜಿತ್ ಕುಮಾರ್ ಗುಹ್ಯ ಅವರು,ತಾಲ್ಲೂಕು ಸಂಘದಿಂದ ಉತ್ತಮ,ಕಾರ್ಯಕ್ರಮ ಆಯೋಜಿಸುತ್ತಾ ಬಂದಿದ್ದೇವೆ.ಈಗಾಗಲೇ ಐದು ದತ್ತಿ ನಿಧಿ ಪ್ರಶಸ್ತಿಗಳನ್ನು ಸ್ಥಾಪನೆ ಮಾಡಿದ್ದೇವೆ.ಮುಂದಿನ ದಿನಗಳಲ್ಲಿ ಮತ್ತಷ್ಟು ದತ್ತಿ ನಿಧಿಗಳನ್ನು ಸ್ಥಾಪನೆ ಮಾಡಲು ಉದ್ದೇಶಿಸಿದ್ದೇವೆ.
ಮುಂದಿನ ತಿಂಗಳಿನಿಂದ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಿರಂತರವಾಗಿ ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ ಎಂದು ಕೆ.ಕೆ ರೆಜಿತ್ ಕುಮಾರ್ ಗುಹ್ಯ ಅವರು ಹೇಳಿದರು.
ಕ್ಷೇಮಾಭಿವೃದ್ಧಿ ನಿಧಿ ಹಸ್ತಾಂತರ;
ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದಿಂದ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 83 ಸಾವಿರ ರೂ ಚೆಕ್ ಅನ್ನು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು,ತಾಲ್ಲೂಕು ಅಧ್ಯಕ್ಷರಿಗೆ ಹಸ್ತಾಂತರಿಸಿದರು.
ವಾರ್ಷಿಕ ಪ್ರಶಸ್ತಿ;
ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಇಸ್ಮಾಯಿಲ್ ಕಂಡಕರೆ, ಪಿ.ವಿ ಅಂಥೋಣಿ,ಕಿಶೋರ್ ಕುಮಾರ್ ಶೆಟ್ಟಿ,ರವಿಕುಮಾರ್, ವಾಸು, ಹಾಗೂ ಸುಬ್ರಮಣಿ ಅವರು ಪಡೆದುಕೊಂಡರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ 2024ನೇ ಸಾಲಿನ ಅತ್ಯುತ್ತಮ ಗ್ರಾಮಾಂತರ ವರದಿ ಪ್ರಶಸ್ತಿ ಪಡೆದ ಇಸ್ಮಾಯಿಲ್ ಕಂಡಕರೆ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಸಮಿತಿ ಸದಸ್ಯರಾದ ಪಳೆಯಂಡ ಪಾರ್ಥ ಚಿನ್ನಪ್ಪ, ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವನಿತಾ ಚಂದ್ರಮೋಹನ್,ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷೆ ವನಿತಾ ಚಂದ್ರಮೋಹನ್ ಇದ್ದರು.
ಕಾರ್ಯಕ್ರಮವನ್ನು ಸಂಘದ ಕಾರ್ಯದರ್ಶಿ ಡಾ.ಹೇಮಂತ್ ಮಾಸ್ಟರ್ ನಿರೂಪಿಸಿ,ನಿರ್ದೇಶಕರಾದ ಕಿಶೋರ್ ಕುಮಾರ್ ಶೆಟ್ಟಿ ಸ್ವಾಗತಿಸಿ,ಪ್ರ.ಕಾರ್ಯದರ್ಶಿ ಎಎಸ್ ಮುಸ್ತಫಾ ವಂದಿಸಿದರು.
ಮಹಾಸಭೆ;
ವಿರಾಜಪೇಟೆ ತಾಲ್ಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷರಾದ ಕೆ.ಕೆ ರೆಜಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಪ್ರ.ಕಾರ್ಯದರ್ಶಿ ಎಎಸ್ ಮುಸ್ತಫಾ ವಾರ್ಷಿಕ ವರದಿ ವಾಚಿಸಿದರು.ಖಜಾಂಜಿ ಡಾ.ಹೇಮಂತ್ ಕುಮಾರ್ ಅವರು ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿದರು.ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷೆ ವನಿತಾ ಚಂದ್ರಮೋಹನ್ ಅವರು ವೀಕ್ಷಕರಾಗಿ ಆಗಮಿಸಿ,ಮಹಾಸಭೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
