ಜುಲೈ 20(ನಾಳೆ) ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ

ಜುಲೈ 20(ನಾಳೆ) ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ

ಮಡಿಕೇರಿ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕೊಡಗು ಪ್ರೆಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಪತ್ರಕರ್ತರಿಗೆ ಜಿಲ್ಲಾಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಾಳೆ(ಜುಲೈ 20) ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಕೂಟದ ಸಂಚಾಲಕರಾದ ಮಂಜುಸುವರ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಡಿಕೇರಿ ತಾಲೂಕಿನ ತಾಳತ್ತಮನೆಯ ನಿವಾಸಿ ಮಲ್ಲನ ಬೆಳ್ಯಪ್ಪ ಅವರ ಗದ್ದೆಯಲ್ಲಿ ಬೆಳಗ್ಗೆ ೯ ಗಂಟೆಗೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗುವುದು. ಈ ಸಂದರ್ಭ ಪತ್ರಕರ್ತರಿಗಾಗಿ ಹ್ಯಾಂಡ್‌ಬಾಲ್, ಹಗ್ಗಜಗ್ಗಾಟ ಹಾಗೂ ವಿವಿಧ ವಿಭಾಗಗಳಲ್ಲಿ ಓಟದ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ ೧ ಗಂಟೆಗೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ.ಬಿ.ಅಯ್ಯಪ್ಪ, ಕೆಸರುಗದ್ದೆ ಕ್ರೀಡಾಕೂಟದ ಸಂಚಾಲಕ ಮಂಜು ಸುವರ್ಣ, ಉದ್ಯಮಿ ಹಾಗೂ ನಗರಸಭೆ ಸದಸ್ಯ ಎಂ.ಎ.ಮುಸ್ತಫಾ, ಭಗವಾನ್ ಬಿಲ್ಡರ್ಸ್‌ನ ಮಾಲೀಕ ಎಸ್.ಸುರೇಶ್, ಸಮಾಜ ಸೇವಕ ಮಲ್ಲನ ಆನಂದ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.