ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ.ಎ ಇಸ್ಮಾಯಿಲ್ ರಾಜೀನಾಮೆ
admincoorgdaily

ಮಡಿಕೇರಿ: ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ.ಎ ಇಸ್ಮಾಯಿಲ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ನಾನು ಕಳೆದ ಎರಡೂವರೆ ದಶಕಗಳ ಕಾಲದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ದುಡಿದಿರುತ್ತೇನೆ. ನನ್ನ ಪಕ್ಷದ ಸೇವೆಯನ್ನು ಗುರುತಿಸಿ ನನಗೆ ನಾವೋಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜವಾಬ್ದಾರಿಯನ್ನು ನೀಡಲಾಯಿತು.
ನಂತರ ಹಲವು ವರ್ಷಗಳ ಕಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯನ್ನು ವಕ್ಷದ ಜಿಲ್ಲಾಧ್ಯಕ್ಷರು,ಶಾಸಕರು,ಹಿರಿಯ ಕಿರಿಯ ಮುಖಂಡರು ಮತ್ತು ಕಾರ್ಯಕರ್ತರ ನೆರವು ಮತ್ತು ಸಹಕಾರದಿಂದ ಉತ್ತಮವಾಗಿ ಮಾಡಿರುತ್ತೇನೆ. ಮುಂದುವರಿದು ಪ್ರಸ್ತುತ ವೈಯುಕ್ತಿಕ ಕಾರಣಗಳಿಂದ ನನಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ನಾನು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಪುರಸ್ಕರಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.