ಕಾವೇರಿ ರತ್ನ ಪ್ರಶಸ್ತಿಗೆ ಕೆ.ಕೆ ಸುಷಾ ಆಯ್ಕೆ

ಕಾವೇರಿ ರತ್ನ ಪ್ರಶಸ್ತಿಗೆ  ಕೆ.ಕೆ ಸುಷಾ ಆಯ್ಕೆ

ಸಿದ್ದಾಪುರ :ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಚನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನ ಮಾದರಿ ಶಾಲೆಯನ್ನಾಗಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ನೀಡುವ ಕಾವೇರಿ ರತ್ನ ಪ್ರಶಸ್ತಿಗೆ ಮುಖ್ಯ ಶಿಕ್ಷಕಿ ಕೆ ಕೆ ಸುಷಾ ಭಾಜನರಾಗಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿ.ವಿ., ವಂಶಿ ನ್ಯೂಸ್ ಹಾಗೂ ರಾಷ್ಟ್ರೀಯ ಅಪರಾದ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಬೆಂಗಳೂರು ಇವರ ಸಹಯೋಗದೊಂದಿಗೆ ನಡೆಯಲಿರುವಅಂತರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ನೀಡಲಾಗುವ ಕಾವೇರಿ ರತ್ನ ಪ್ರಶಸ್ತಿಗೆ ಕೆ.ಕೆ ಸುಷಾ ಆಯ್ಕೆಯಾಗಿದ್ದಾರೆ. ಈ ಹಿಂದೆ ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪ್ರಗತಿಗೆ ಶಾಲಾ ಹಂತದಲ್ಲಿ ಕೈಗೊಂಡ ವಿಶಿಷ್ಟ ಕಾರ್ಯಕ್ರಮ ಸೇವಾ ಸಾಧನೆಯನ್ನು ಪರಿಗಣಿಸಿ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಶಿಕ್ಷಣ ಸಿಂಧು ಪ್ರಶಸ್ತಿ ಯೊಂದಿಗೆ ಶಿಕ್ಷಣ ಸಾರಥಿ, ಶಿಕ್ಷಕ ಸಿರಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಂದಲೂ ಪ್ರಶಸ್ತಿ ಲಭಿಸಿದೆ.