ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಕೆ.ಕೆ ಸುಷಾ ಆಯ್ಕೆ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ  ಕೆ.ಕೆ ಸುಷಾ ಆಯ್ಕೆ

ಸಿದ್ದಾಪುರ :ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನ ಮಾದರಿ ಶಾಲೆಯನ್ನಾಗಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಗುರುತಿಸಿ ಕೊಡಗು ಜಿಲ್ಲಾ ಶಾಲಾ ಶಿಕ್ಷಣ, ಸಾಕ್ಷರತೆ ಇಲಾಖೆಯಿಂದ ನೀಡುವ ಜಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಕೆ ಕೆ ಸುಷಾ ಭಾಜನರಾಗಿದ್ದಾರೆ. ಈ ಹಿಂದೆ ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪ್ರಗತಿಗೆ ಶಾಲಾ ಹಂತದಲ್ಲಿ ಕೈಗೊಂಡ ವಿಶಿಷ್ಟ ಕಾರ್ಯಕ್ರಮಗಳು ಹಾಗೂ ಸೇವಾ ಸಾಧನೆಯನ್ನು ಪರಿಗಣಿಸಿ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಶಿಕ್ಷಣ ಸಿಂಧು ಪ್ರಶಸ್ತಿ ಯೊಂದಿಗೆ ಶಿಕ್ಷಣ ಸಾರಥಿ, ಶಿಕ್ಷಕ ಸಿರಿ ಸೇರಿದಂತೆ ಇತ್ತೀಚೆಗೆ ಕಾವೇರಿ ರತ್ನ ಪ್ರಶಸ್ತಿ ಪಡೆದುಕೊಂಡಿದ್ದರು ಇದರೊಂದಿಗೆ ವಿವಿಧ ಸಂಘ ಸಂಸ್ಥೆಗಳಿಂದಲೂ ಪ್ರಶಸ್ತಿ, ಸನ್ಮಾನ ಗೌರವ ಲಭಿಸಿದೆ.