ಶಾಸಕ‌ ಎಎಸ್ ಪೊನ್ನಣ್ಣ ‌ಅವರನ್ನು ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್

Aug 7, 2026 - 10:24
 0  114
ಶಾಸಕ‌ ಎಎಸ್ ಪೊನ್ನಣ್ಣ ‌ಅವರನ್ನು ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್

ಬೆಂಗಳೂರು:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರು ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಬೆಂಗಳೂರು ನಿವಾಸಕ್ಕೆ ಭೇಟಿ ನೀಡಿದರು.

 ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಎಎಸ್ ಪೊನ್ನಣ್ಣ ‌ಅವರಿಗೆ ಮಂತ್ರಿ ಸ್ಥಾನ ಕೊನೆಯ ಕ್ಷಣದಲ್ಲಿ ಕೈ ತಪ್ಪಿತ್ತು.ಇದರ ಬಗ್ಗೆ ಎಎಸ್ ಪೊನ್ನಣ್ಣ ಅವರು ಬೇಸರ ಕೂಡ ಹೊರಹಾಕಿದ್ದರು. ಶಾಸಕರ ನಿವಾಸಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷರನ್ನು ಪೊನ್ನಣ್ಣ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆಗಳು ಚರ್ಚೆ ನಡೆಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0