ಕೊಡಗಿನ ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಆಗ್ರಹ

Jun 16, 2026 - 19:27
Jun 16, 2026 - 19:35
 0  146
ಕೊಡಗಿನ ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಆಗ್ರಹ

ಮಡಿಕೇರಿ:ಜನರ ಸಮಸ್ಯೆಗಳಿಗೆ ಕಾಂಗ್ರೆಸ್ ಶಾಸಕದ್ವಯರು ಸ್ಪಂದಿಸುತ್ತಾ ಕೊಡಗು ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಎರಡನೇ ‌ಹಂತದ ಸಚಿವ ಸಂಪುಟದಲ್ಲಿ ಯುವ ಮುಖಗಳಿಗೆ ಹೆಚ್ಚಿನ ಅವಕಾಶ ‌ನೀಡಬೇಕು, ಈ ಸಂದರ್ಭದಲ್ಲಿ ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ಕೊಡಗು ಜಿಲ್ಲೆಯನ್ನು ಪರಿಗಣಿಸಬೇಕೆಂದು ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಕಳೆದ ಒಂದು ದಶಕಗಳಿಂದ ಕೊಡಗು ಜಿಲ್ಲೆಗೆ ಸಚಿವ ಸ್ಥಾನವಿಲ್ಲದೆ ನಿರಂತರವಾಗಿ ಜಿಲ್ಲೆಯನ್ನು ನಿರ್ಲಕ್ಷಿಸುತ್ತಾ ಬಂದಿದೆ. ಈ ಬಾರಿ ಡಿ.ಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ‌ ಸಿಗುವ ವಿಶ್ವಾಸವನ್ನು ಕೆಪಿಸಿಸಿ ಸದಸ್ಯ ಮಂಜುನಾಥ್ ‌ಗುಂಡೂರಾವ್ ಅವರು ವ್ಯಕ್ತಪಡಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0