ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ನೀಡಲು ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಆಗ್ರಹ

Jun 7, 2026 - 09:37
Jun 8, 2026 - 09:45
 0  168
ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ನೀಡಲು ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಆಗ್ರಹ
ಮಂಜುನಾಥ್ ಗುಂಡೂರಾವ್

ಮಡಿಕೇರಿ;ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವ ಬೆಂಗಳೂರಿನ ಗಾಂಧಿನಗರದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ* ಸಚಿವ ಸ್ಥಾನ ನೀಡಬೇಕೆಂದು ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದಿನೇಶ್ ಗುಂಡೂರಾವ್ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ.ಕಾಂಗ್ರೆಸ್ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದಿದ್ದಾರೆ.

ಯಾವುದೇ ಅಪಸ್ವರವಿಲ್ಲದೆ ಪಕ್ಷಕ್ಕಾಗಿ ದುಡಿಯುತ್ತಿರುವ ದಿನೇಶ್‌ ಗುಂಡೂರಾವ್ ಅವರು,ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ,ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿದ್ದಾರೆ. ಅದಲ್ಲದೇ ವಿವಿಧ ರಾಜ್ಯಗಳ ಉಸ್ತುವಾರಿಯನ್ನು ವಹಿಸಿಕೊಂಡು ಹೈಕಮಾಂಡ್ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ದಿನೇಶ್ ಗುಂಡೂರಾವ್ ನಿಭಾಯಿಸಿದ್ದಾರೆ.

ಸತತ ಆರು ಬಾರಿ ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿರುವ ದಿನೇಶ್ ಗುಂಡೂರಾವ್ ಅವರು ಈ ಹಿಂದೆ ಎರಡು ಬಾರಿ‌ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ (6 ಬಾರಿ ಶಾಸಕರಾಗಿ ಶ್ರೀ ಸಿದ್ದರಾಮಯ್ಯ ನವರ ಮೊದಲ ಮಂತ್ರಿ ಮಂಡಲದಲ್ಲಿ 2 ವರ್ಷ ಹಾಗು ಎರಡನೇ ಸಂಪುಟದಲ್ಲಿ 3 ವರ್ಷ ಮಂತ್ರಿಯಾಗಿ ಸೇವೆ ಸಾಧಿಸಿದ್ದಾರೆ. ) ಜನಮನ್ನಣೆಗಳಿಸಿರುವ ಸಚಿವರಲ್ಲಿ ಒಬ್ಬರು. 

ಕಳೆದ ಮೂರು ವರ್ಷಗಳ ಕಾಲ ಯಾವುದೇ ರೀತಿಯ ಭ್ರಷ್ಟಾಚಾರ ಆರೋಪವಿಲ್ಲದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಖಾತೆಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದಾರೆ.ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಗಟ್ಟಿಯಾಗಿ ಪ್ರತಿಪಾದಿಸುತ್ತಾ ಬಂದಿರುವ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ತಪ್ಪಿರುವುದು ಬೇಸರ ತಂದಿದೆ.

ಜಾತಿ (Social engineering ) ಸಮೀಕರಣದಲ್ಲಿ ಸಚಿವ ನೀಡುವುದಾದರೆ, ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಹೊಂದಿರುವ ಸಣ್ಣ ಜಾತಿಗಳ ಕಾಂಗ್ರೆಸ್ ಶಾಸಕರಿಗೆ ಅನ್ಯಾಯ ಮಾಡಿದಂತಾಗುತ್ತದೆ ಅಲ್ಲವೇ?? ಎರಡನೇ ಹಂತದ ಸಚಿವ‌ ಸಂಪುಟದಲ್ಲಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ನೀಡುವುದರ ಮೂಲಕ ( balancing of social justice) ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಜಾತ್ಯತೀತ ಸಿದ್ಧಾಂತಕೆ ಪಕ್ಷದ ಬದ್ಧತೆ ತೋರಿದಂತಾಗುತ್ತದೆ ಎಂದು ಮಂಜುನಾಥ್ ‌ಗುಂಡೂರಾವ್ ಅವರು‌‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0