SIR ಕುರಿತು KPCC ಕಾರ್ಯಾಗಾರ, ಕೊಡಗು ಕಾಂಗ್ರೆಸ್ ಪ್ರತಿನಿಧಿಗಳು ಭಾಗಿ

SIR ಕುರಿತು KPCC ಕಾರ್ಯಾಗಾರ, ಕೊಡಗು ಕಾಂಗ್ರೆಸ್ ಪ್ರತಿನಿಧಿಗಳು ಭಾಗಿ

ಬೆಂಗಳೂರು, ಜೂ. 26: ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಗುರುವಾರ SIR -Systematic Voters' Education and Electoral Participation- ಕುರಿತು ರಾಜ್ಯಮಟ್ಟದ ಮಹತ್ವದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಸೇರಿದಂತೆ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ, ಹೊಸ ಮತದಾರರ ನೋಂದಣಿ, ತಿದ್ದುಪಡಿ ಹಾಗೂ ಮತದಾನ ಜಾಗೃತಿ ಕುರಿತು ಕಾರ್ಯಾಗಾರದಲ್ಲಿ ಚರ್ಚೆ ನಡೆಯಿತು. ಬೂತ್ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಯಿತು.