ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲೂಕು ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ಆರ್ ರಾಜೇಶ್ ನೇಮಕ

May 13, 2026 - 16:58
 0  327
ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲೂಕು ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ಆರ್ ರಾಜೇಶ್ ನೇಮಕ

ಗೋಣಿಕೊಪ್ಪ: ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲೂಕು ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ಆರ್ ರಾಜೇಶ್ ನೇಮಕವಾಗಿದ್ದಾರೆ.

 ಈ ಹಿಂದೆ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಸಿ. ಅಪ್ಪಣ್ಣ ಅವರು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿಗೆ ವರ್ಗಾವಣೆಗೊಂಡ ಹಿನ್ನೆಲೆ ಮಾಲ್ದಾರೆ ಸರ್ಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಿಗೆ ಕಾರ್ಯ ನಿರ್ವಹಿಸುತ್ತಿದ್ದ ಕೆ.ಆರ್ ರಾಜೇಶ್ ಅವರನ್ನು ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ, ಅರುವತ್ತೊಕು, ಕಿರುಗೂರು ಪಂಚಾಯಿತಿ ಆಡಳಿತಾಧಿಕಾರಿಯಾಗಿ ಕರ್ತವ್ಯದ ಜವಾಬ್ದಾರಿಯಲ್ಲಿದ್ದಾರೆ. ಇವರು ಈ ಹಿಂದೆ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 1
Wow Wow 1