ನಾಳೆಯಿಂದ ಎಂದಿನಂತೆ ರಸ್ತೆಗಿಳಿಯಲಿದೆ KSRTC ಬಸ್ಸ್ ಗಳು

ಬೆಂಗಳೂರು: ಹೈಕೋರ್ಟ್ ಚಾಟಿ ಬೆನ್ನಲ್ಲೇ,ಸಾರಿಗೆ ನೌಕರರು ಮುಷ್ಕರ ನಿಲ್ಲಿಸಿದ್ದು ನಾಳೆಯಿಂದ ಎಂದಿನಂತೆ KSRTC ಬಸ್ಸ್ ಗಳು ರಸ್ತೆಗಿಳಿಯಲಿದೆ.
ನ್ಯಾಯಾಲಯದ ಆದೇಶ ಹಾಗೂ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಜಾರಿಯಿದ್ದರೂ ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಳಿಗೆ ಒತ್ತಾಯಿಸಿ ಮಂಗಳವಾರ ಬಸ್ ಸೇವೆ ನಿಲ್ಲಿಸಿ ಮುಷ್ಕರ ನಡೆಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಸಾರ್ಟಿಸಿ) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ನಡೆಯನ್ನು ಹೈಕೋರ್ಟ್ ಕಟುವಾಗಿ ಟೀಕಿಸಿದೆ. ತಕ್ಷಣವೇ ಮುಷ್ಕರ ನಿಲ್ಲಿಸಿ, ಆ ಸಂಬಂಧ ಬುಧವಾರ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು. ಒಂದು ವೇಳೆ, ಮುಷ್ಕರ ಮುಂದುವರಿಸಿದರೆ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು ಎಂದು ಎಚ್ಚರಿಸಿರುವ ನ್ಯಾಯಪೀಠ, ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ವಿರುದ್ಧ ಎಸ್ಮಾ ಕಾಯ್ದೆಯಡಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಸಹ ಜರುಗಿಸಬೇಕಾಗುತ್ತದೆ ಎಂದು ಸೂಚಿಸಿ, ವಿಚಾರಣೆಯನ್ನು ಗುರುವಾರಕ್ಕೆ (ಆಗಸ್ಟ್ 7) ಮುಂದೂಡಿತು. ಇದೇ ವೇಳೆ, ಮುಷ್ಕರವನ್ನು ತಡೆಹಿಡಿದು ಸೋಮವಾರ (ಆಗಸ್ಟ್ 4) ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹೊರಡಿಸಿದ್ದ ಮಧ್ಯಂತರ ಆದೇಶವನ್ನು 2 ದಿನಗಳವರಗೆ ವಿಸ್ತರಿಸಿತು