Kodagu

ಕಡಗದಾಳು: ಅಕ್ರಮ ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ, 28 ಮಂದಿ ವಶ

admincoorgdaily

ಕಡಗದಾಳು: ಅಕ್ರಮ ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ, 28 ಮಂದಿ ವಶ

*ಮಡಿಕೇರಿ, ಜುಲೈ 1*: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮವಾರಪೇಟೆ ತಾಲ್ಲೂಕಿನ ಕಡಗದಾಳು ಗ್ರಾಮದಲ್ಲಿ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ 28 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮಡಿಕೇರಿ ಉಪವಿಭಾಗ ಮಟ್ಟದ ಅಪರಾಧ ಪತ್ತೆ ವಿಶೇಷ ತಂಡ ಬುಧವಾರ ನಸುಕಿನ 2 ಗಂಟೆಗೆ ದಾಳಿ ನಡೆಸಿತು. ವಶಕ್ಕೆ ಪಡೆದವರಲ್ಲಿ ಮಂಡ್ಯ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಮೂಲದವರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊ.ಸಂ. 111/2026, ಕಲಂ 30 ಕರ್ನಾಟಕ ಪೊಲೀಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ದಾಳಿ ವೇಳೆ ರೂ. 11,08,130 ನಗದು, 5 ಕಾರು, 1 ದ್ವಿಚಕ್ರ ವಾಹನ ಹಾಗೂ 35 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್ಪಿ ಸೂರಜ್ ಪಿ.ಎ, ಪಿಐ ಚಂದ್ರಶೇಖರ್ ಎಚ್.ವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಉತ್ತಮ ಕಾರ್ಯನಿರ್ವಹಿಸಿದ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಪ್ರಶಂಸಿಸಿದೆ.