ಕಾವೇರಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕಲೋತ್ಸವ ಕಾರ್ಯಕ್ರಮ
ಶನಿವಾರಸಂತೆ:ನ 29: -‘ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಪಠ್ಯಚಟುವಟಿಕೆಗೆ ಸೀಮಿತವಾಗದೆ ಮಕ್ಕಳಲ್ಲಿ ಅಡಗಿರುವ ಸಾಂಸ್ಕೃತಿಕ ಮತ್ತು ನಾನಾ ಪ್ರತಿಭೆಗಳನ್ನು ಪ್ರದರ್ಶಿಸಿಸಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ಕಳೆದ 23 ವರ್ಷಗಳಿಂದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ’ ಎಂದು ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಹೇಳಿದರು.
ಅವರು ಶನಿವಾರಸಂತೆ ಕಾವೇರಿ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣ ಇಲಾಖೆ ಮತ್ತು ಕಾವೇರಿ ಪದವಿ ಪೂರ್ವ ಕಾಲೇಜು ಹಾಗೂ ಕಾವೇರಿ ಪ್ರೌಢ ಶಾಲೆ ಪ್ರಜ್ವಲ್ ಎಜುಕೇಷನ್ ಟ್ರಸ್ಟ್ ಇದರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶನಿವಾರಸಂತೆ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಮಕ್ಕಳ 2025-26ನೇ ಸಾಲಿನ ‘ಕಲೋತ್ಸವ’ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಪ್ರತಿಯೊಬ್ಬ ಮಕ್ಕಳಲ್ಲಿ ಪಠ್ಯಚಟುವಟಿಕೆಗೆ ಹೊರತಾದ ಬಹುಮುಖ ಪ್ರತಿಭೆಗಳಿರುತ್ತದೆ ಇದನ್ನು ಗುರುತಿಸುವ ಸಲುವಾಗಿ 2001 ರಲ್ಲಿ ಆಗಿನ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಪ್ರಾರಂಭಿಸಿತ್ತು ಈ ಮೂಲಕ ಪ್ರತಿವರ್ಷ ಹಮ್ಮಿಕೊಳ್ಳುತ್ತಿರುವ ಈ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಈ ವೇದಿಕೆ ಮೂಲಕ ಅನಾವರಣಗೊಳಿಸುತ್ತಿದ್ದಾರೆ ಎಂದರು. ಸರಕಾರ ಮತ್ತು ಶಿಕ್ಷಣ ಇಲಾಖೆ ಮೂಲಕ ಹಮ್ಮಿಕೊಳ್ಳುವ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸರಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಾಲೆ, ಶಿಕ್ಷಣ ಸಂಸ್ಥೆಯ ಮಕ್ಕಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಾರೆ ಈ ನಿಟ್ಟಿನಲ್ಲಿ ಈ ಪ್ರೌಢಶಾಲಾ ವಿಭಾಗದ ಮಕ್ಕಳಿಗೆ ಕ್ಲಸ್ಟರ್ ಮಟ್ಟದ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತಿದೆ ಎಂದರು.
ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಗೀತ ಹರೀಶ್ ಮಾತನಾಡಿ-ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಲು ಕಲೋತ್ಸವ ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆಯಾಗಿದ್ದು ಈ ಮೂಲಕ ಮಕ್ಕಳು ತನ್ನ ಪ್ರತಿಭೆಗಳನ್ನು ಉತ್ತಮವಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ವಿದ್ಯಾಸಂಸ್ಥೆ ಪ್ರಾಂಶುಪಾಲರಾದ ದೇವರಾಜ್ ಅಧ್ಯಕ್ಷತೆವಹಿಸಿ ಮಾತನಾಡಿ-ಗ್ರಾಮೀಣ ಭಾಗದ ಮಕ್ಕಳಲ್ಲಿ ನಾನಾ ಸಾಂಸ್ಕೃತಿಕ ಪ್ರತಿಭೆಗಳಿರುತ್ತದೆ ಈ ದಿಸೆಯಲ್ಲಿ ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನಿಯ.
ಕೆಲವೆಡೆ ತೀರ್ಪುಗಾರರು ಸರಿಯಾದ ತೀರ್ಪು ನೀಡದೆ ಮಕ್ಕಳ ಪ್ರತಿಭೆ ಚಿವುಟಿ ಹೋಗುತ್ತಿದೆ ಆ ರೀತಿ ಆಗದ ರೀತಿ ತೀರ್ಪುಗರಾರು ಎಚ್ಚರಿಕೆ ವಹಿಸಬೇಕು, ನಿಜವಾದ ಪ್ರತಿಭೆ ಹೊರಹೋಮ್ಮಬೇಕು ಶಾಲಾ ಮೇಲಿನ ಅಭಿಮಾನದಿಂದ ತೀರ್ಪು ನೀಡಬಾರದು ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಕುರಿತು ಶನಿವಾರಸಂತೆ ಸಮೂಹ ಸಂಪನ್ಮೂಲ ವ್ಯಕ್ತಿ ದಿನೇಶ್ ಸಿ. ಕೆ. ಮಾತನಾಡಿ ಇಂದು ಮಕ್ಕಳಿಗೆ ಅನೇಕ ಸೌಲಭ್ಯ ಸವಲತ್ತುಗಲಿದೆ ಅದನ್ನು ಮಕ್ಕಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿವಿಘ್ನೇಶ್ವರ ಪ್ರೌಢ ಶಾಲಾ ಶಿಕ್ಷಕ ಜಯಕುಮಾರ್, ಕವಿತಾ,ಪ್ರಜ್ವಲ್ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಹೂವಯ್ಯ, ಕವಿತಾ ಮಾತನಾಡಿದರು,
ಕಾರ್ಯಕ್ರಮ ವೇದಿಕೆಯಲ್ಲಿ ಕಾವೇರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಅಶ್ವತ್, ಸೋಮವಾರಪೇಟೆ ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ಕವಿತಾ, ಸೇಕ್ರೆಡ್ ಹಾರ್ಟ್ ಶಾಲಾ ಪ್ರಾಂಶುಪಾಲರಾದ ಮೈಕಲ್ ಸೆಬಸ್ಟಿನ್, ಜಯಕುಮಾರ್ , ಸೂಚಿತ್ರ, ಸಣ್ಮುಖ, ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲಲಿತಾ, ಮಾದ್ರೆ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ಪುಟ್ಟರಾಜು,ಬೀಳಹ ಶಾಲಾ ಮುಖ್ಯ ಶಿಕ್ಷಕಿ ಶಾಂತಮ್ಮ,ಬಾಪೂಜಿ ವಿದ್ಯಾ ಸಂಸ್ಥೆ ಮುಖ್ಯ ಶಿಕ್ಷಕ ಉಲ್ಲಾಸ್ , ಚಿಕ್ಕಕೊಳತ್ತೂರ್ ಶಾಲಾ ಮುಖ್ಯ ಶಿಕ್ಷಕಿ ಜಯಮ್ಮ ಸಮೂಹ ಸಂಪನ್ಮೂಲವ್ಯಕ್ತಿ ,ಮದು, ಮುರುಳಿದರ್ ಮುಂತಾದವರಿದ್ದರು.
ಇದೆ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸಮೂಹ ಸಂಪನ್ಮೂಲ ವ್ಯಕ್ತಿ ದಿನೇಶ್, ಈ ಹಿಂದೆ ಕಲೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಿದ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆ ಪ್ರಾಂಶುಪಾಲ ಮೈಕಲ್ ಸೇಬಸ್ಟಿನ್ ಹಾಗೂ ಸ 110 ಮೀಟರ್ ಹರ್ಡಲ್ಸ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಶನಿವಾರಸಂತೆಯ ಕಾವೇರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಅನೀಶ್ ರವರನ್ನು ಕಾಲೇಜು ವತಿಯಿಂದ ಸನ್ಮಾನ ಮಾಡಲಾಯಿತು.