Kodagu

ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

admincoorgdaily

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ದ್ವಜಾರೋಹಣ ನೆರವೇರಿಸಿದ ಬಳಿಕ ಶಿಕ್ಷಕರಾದ ಕಿರಣ್ ರವರು ದಿನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಭಾಷಣ, ಕನ್ನಡ ಹಾಡು,ವಿವಿಧ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಶಾಲೆಯ ಶಿಕ್ಷಕರಾದ ಮೈನಕುಮಾರಿ, ದಿವ್ಯ, ವಸಂತ ಲಕ್ಷ್ಮಿ,ಯಮುನ,ಸುಹೈಲ, ಪಾಲಿಕ, ತಂಗಮ್ಮ, ದಂಯಂತಿ, ದಿವಿನ್, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.