Kodagu

ಕರಡಿಗೋಡು-ಚಿಕ್ಕನಹಳ್ಳಿ ರಸ್ತೆ ಮುಳುಗಡೆ :ಸಂಚಾರ ನಿರ್ಬಂಧ

admincoorgdaily

ಕರಡಿಗೋಡು-ಚಿಕ್ಕನಹಳ್ಳಿ ರಸ್ತೆ ಮುಳುಗಡೆ :ಸಂಚಾರ ನಿರ್ಬಂಧ

ವಿರಾಜಪೇಟೆ:ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ವಿರಾಜಪೇಟೆ ತಾಲ್ಲೂಕು ಅಮ್ಮತ್ತಿ ಹೋಬಳಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿದೆ. ಈ ಹಿನ್ನೆಲೆಯಲ್ಲಿ ಕರಡಿಗೋಡು - ಚಿಕ್ಕನಹಳ್ಳಿ ಸಂಪರ್ಕ ರಸ್ತೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ರಸ್ತೆಯ ಮೇಲೆ ನೀರು ಹರಿದು ಹೋಗುತ್ತಿರುವ ಕಾರಣ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಈ ಸಂಬಂಧ ಅಪಾಯ ತಪ್ಪಿಸಲು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಬ್ಯಾರಿಕೇಡ್ ಮತ್ತು ಸೂಚನಾ ಫಲಕಗಳನ್ನು ಅಳವಡಿಸಿದ್ದಾರೆ. "ಈ ರಸ್ತೆಯಲ್ಲಿ ತೆರಳದೇ ಬದಲಿ ರಸ್ತೆಯ ಮೂಲಕ ಸಂಚರಿಸುವಂತೆ" ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ಮಳೆ ಇನ್ನೂ ಮುಂದುವರಿಯುತ್ತಿರುವುದರಿಂದ ಕಾವೇರಿ ನದಿ ತೀರದ ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಹಾಗೂ ನದಿ ದಾಟದಂತೆ ಕಂದಾಯ ಇಲಾಖೆ ಸೂಚಿಸಿದೆ.