ಕರವೇ ಕುಶಾಲನಗರ ತಾಲ್ಲೂಕು ಸಾಮಾನ್ಯ ಸಭೆ
ಕುಶಾಲನಗರ:ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲ್ಲೂಕು ಸಾಮಾನ್ಯ ಸಭೆಯು ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಸಮಿತಿಯನ್ನು ರಚಿಸಲಾಯಿತು.
ತಾಲ್ಲೂಕು ಅಧ್ಯಕ್ಷರಾಗಿ ಅಣ್ಣಯ್ಯ ಅವರನ್ನು ಮುಂದುವರಿಸಲು ಸಭೆಯ ಪ್ರಸ್ತಾವನೆಯನ್ನು ಅಂಗೀಕರಿಸಿ ಅನುಮೋದಿಸಲಾಯಿತು. ನಂತರ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಚರ್ಚಿಸಿ ಪಟ್ಟಿ ಸಿದ್ಧಪಡಿಸಲಾಯಿತು. ಮಹಿಳಾ ತಾಲ್ಲೂಕು ಅಧ್ಯಕ್ಷೆ ರೂಪಾ ಗಣೇಶ್‌ಪ್ರಾಸ್ತಾವಿಕ ನುಡಿಯನ್ನಾಡಿದರು. ಜಿಲ್ಲಾ ಮಹಿಳಾ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಕುದಪಜೆ ಮಾತನಾಡಿ, ಸಂಘಟನೆಯನ್ನು ಬಲಪಡಿಸಿ ಜನರ ಮತ್ತು ಕನ್ನಡಪರ ಹೋರಾಟಕ್ಕೆ ಸಿದ್ಧರಾಗುವಂತೆ ಕರೆ ನೀಡಿದರು.
ಸಭೆಯಲ್ಲಿ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪ್ರವೀಣ್ ಡಿಂಗ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಸಂತೋಷ್, ಜಿಲ್ಲಾ ಉಪಾಧ್ಯಕ್ಷ ಕೆ.ಆರ್. ರಾಜೇಶ್, ಜಿಲ್ಲಾ ಸಂಚಾಲಕ ಗೋವಿಂದರಾಜದಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ದಿವ್ಯ ದೇವಾಂಗ, ಜಿಲ್ಲಾ ಉಪಾಧ್ಯಕ್ಷೆ ಸುಪ್ರೀತಾ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ ಸೇರಿದಂತೆ ಹಲವರು ಭಾಗವಹಿಸಿದ್ದರು. ಇದಲ್ಲದೆ ಸೋಮವಾರಪೇಟೆ ಮಹಿಳಾ ತಾಲ್ಲೂಕು ಅಧ್ಯಕ್ಷೆ ಶ್ರೀಮತಿ ಆಶಾ, ಪ್ರಧಾನ ಕಾರ್ಯದರ್ಶಿ ಪ್ರೇಮ, ಸಂಘಟನಾ ಕಾರ್ಯದರ್ಶಿ ಶಶಿಕಲಾ, ಕುಶಾಲನಗರ ತಾಲ್ಲೂಕು ಗೌರವ ಅಧ್ಯಕ್ಷ ಧನರಾಜ್, ಪ್ರಧಾನ ಕಾರ್ಯದರ್ಶಿ ಕುಮಾರ್ ದೇವಾಂಗ, ಖಜಾಂಜಿ ರೋನಾಲ್ಡ್, ಕಾರ್ಯದರ್ಶಿ ರಾಕೇಶ್, ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ಮಹಿಳಾ ಕಾರ್ಯದರ್ಶಿ ಸಿಂಧು, ನಗರ ಅಧ್ಯಕ್ಷೆ ಅನಿತಾ ಹಾಗೂ ತಾಲ್ಲೂಕಿನ ಪದಾಧಿಕಾರಿಗಳು ಹಾಜರಿದ್ದರು. ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿವ್ಯ ದೇವಾಂಗ ನಿರೂಪಿಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
