ಹುದಿಕೇರಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ
ಪೊನ್ನಂಪೇಟೆ, ಜು. 26: ಕಾರ್ಗಿಲ್ ಯುದ್ಧದಲ್ಲಿ ಭಾರತ ಸಾಧಿಸಿದ ಐತಿಹಾಸಿಕ ವಿಜಯದ ಸ್ಮರಣಾರ್ಥ ಹುದಿಕೇರಿ ಮಾಜಿ ಸೈನಿಕರ ಸಂಘದ ವತಿಯಿಂದ ಹುದಿಕೇರಿಯ ಅಮರ್ ಜವಾನ್ ಸ್ಮಾರಕದಲ್ಲಿ ಭಾನುವಾರದಂದು ಕಾರ್ಗಿಲ್ ವಿಜಯ ದಿವಸ್ ಅನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು.
1999ರಲ್ಲಿ ಪಾಕಿಸ್ತಾನದ ಸೈನಿಕರು ಕಪಟತನದಿಂದ ಭಾರತದ ಗಡಿಯನ್ನು ಅತಿಕ್ರಮಿಸಿ ಭೂಪ್ರದೇಶವನ್ನು ಆಕ್ರಮಿಸಿಕೊಂಡು ಭಾರತೀಯ ಸೈನಿಕರ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ, ಭಾರತೀಯ ಸೇನೆ ನಡೆಸಿದ "ಆಪರೇಷನ್ ವಿಜಯ್" ಮೂಲಕ ಶತ್ರುಗಳನ್ನು ಹಿಮ್ಮೆಟ್ಟಿಸಿ ದೇಶದ ಗಡಿಯನ್ನು ಮರುಸ್ವಾಧೀನಪಡಿಸಿಕೊಂಡಿತು.
ಈ ಹೋರಾಟದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ತ್ಯಾಗವನ್ನು ಸ್ಮರಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಮರ್ ಜವಾನ್ ಸ್ಮಾರಕದಲ್ಲಿ ಪುಷ್ಪನಮನ ಸಲ್ಲಿಸಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ದೇಶಕ್ಕಾಗಿ ವೀರಮರಣ ಹೊಂದಿದ ಯೋಧ ಕೋಳೆರ ಸವೀನ್ ಅವರ ನೆನಪಿನಲ್ಲಿ ಅವರ ಮಾತೋಶ್ರೀಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುದಿಕೇರಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಬಲ್ಯಮೀದರಿರ ಪ್ರಕಾಶ್ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷ ಕೊಟ್ಟುಕತ್ತೀರ ಸೋಮಣ್ಣ ಭಾಗವಹಿಸಿದ್ದರು. ಹುದಿಕೇರಿ ಪೊಲೀಸ್ ಉಪಠಾಣೆಯ ಸಹಾಯಕ ಉಪನಿರೀಕ್ಷಕ ಸುಕುಮಾರ್, ಸಂಘದ ಹಿರಿಯ ಸಲಹೆಗಾರರಾದ ಬಯವಂಡ ಯು. ವಿಶ್ವಕಾಳಪ್ಪ, ಮಂಡಚಂಡ ದಿನೇಶ್ ಚಿಟ್ಟಿಯಪ್ಪ, ನಿವೃತ್ತ ಭೂಮಾಪನ ಇಲಾಖೆಯ ಸಹಾಯಕ ನಿರ್ದೇಶಕ ಬಾನಂಗಡ ಅರುಣ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಜ್ಜೀಕುಟ್ಟಿರ ಮುತ್ತಪ್ಪ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಕಿರಿಯಮಾಡ ಮಿಲನ್ ಗಣಪತಿ, ಚಂಗುಲಂಡ ಸೂರಜ್, ಮಾಜಿ ಸೈನಿಕರ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
