ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ಹುತಾತ್ಮರ ನೆನಪು: ಸ್ಕೌಟ್ಸ್, ಗೈಡ್ಸ್ ನಿಂದ ಪುಷ್ಪ ನಮನ"
admincoorgdaily

ಮಡಿಕೇರಿ:ಇಂದು ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು ನಗರಸಭೆ ಬಳಿ ಇರುವ ಯುದ್ಧ ಸ್ಮಾರಕದ ಬಳಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಬೆಳಗ್ಗೆ 11 ಗಂಟೆಗೆ ಶ್ರದ್ಧಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯೂ, ಸ್ಥಳೀಯ ಆಯುಕ್ತರಾದ ಮುತ್ತಪ್ಪ, ಜಿಲ್ಲಾ ಖಜಾಂಚಿ ಮುದ್ದಪ್ಪ, ಮಡಿಕೇರಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ, ಹಾಗೂ ಕಾರ್ಯದರ್ಶಿ ಚಂದ್ರಶೇಖರ್ ಅವರು ಉಪಸ್ಥಿತರಿದ್ದರು. ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿ ಒಂದು ನಿಮಿಷ ಮೌನ ಆಚರಿಸಲಾಯಿತು.