ಕರಿಕೆ ಕಾಂಗ್ರೆಸ್ ಕಾರ್ಯರ್ತರ ಸಭೆ:ಬಿಜೆಪಿ ತೊರೆದು ಹಲವು ಮಂದಿ‌ ಶಾಸಕ ಎ.ಎಸ್ ಪೊನ್ನಣ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಕರಿಕೆ ಕಾಂಗ್ರೆಸ್ ಕಾರ್ಯರ್ತರ ಸಭೆ:ಬಿಜೆಪಿ ತೊರೆದು ಹಲವು ಮಂದಿ‌ ಶಾಸಕ ಎ.ಎಸ್ ಪೊನ್ನಣ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಕರಿಕೆ: ಗ್ರಾಮ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಬೇಕಲ್ ರಾಜ, ವಲಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಹಾಲಿ ವಲಯ ಅಧ್ಯಕ್ಷರ ಇಚ್ಛೆಯಂತೆ, ಕಲಿಕೆ ವಲಯಕ್ಕೆ ನೂತನ ವಲಯ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯನ್ನು ಮಾಡಲಾಯಿತು. ಹರಿಪ್ರಸಾದ್ ರವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಇವರಿಗೆ ಶಾಲು ಹೊದಿಸಿ, ಪಕ್ಷದ ದ್ವಜ ನೀಡುವ ಮೂಲಕ ಶುಭ ಕೋರಲಾಯಿತು. ಬಿಜೆಪಿ ತೆರೆದು ಕಾಂಗ್ರೆಸ್ ಸೇರ್ಪಡೆ: ಇದೇ ಸಂದರ್ಭದಲ್ಲಿ ಹತ್ತಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ಶಾಸಕರ ಕಾರ್ಯ ವೈಖರಿಯನ್ನು ಮೆಚ್ಚಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಶಾಸಕರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಇವರಿಗೆ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.