ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ-2025 ಅಂಗೀಕಾರ:ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಅದ್ಧೂರಿ ಸ್ವಾಗತ

Dec 21, 2025 - 07:31
 0  358
ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ-2025 ಅಂಗೀಕಾರ:ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಅದ್ಧೂರಿ ಸ್ವಾಗತ

ಗೋಣಿಕೊಪ್ಪ:ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ-2025 ಅನುಷ್ಠಾನ ಗೊಳಿಸಿ, ಕೊಡಗಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಜಮ್ಮ ಹಾಗೂ ಪಟ್ಟೆದಾರ ಸಮಸ್ಯೆಯನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರವಹಿಸಿ, ಬೆಳಗಾವಿ ಅಧಿವೇಶನದ ಬಳಿಕ ಕ್ಷೇತ್ರಕ್ಕೆ ಮೊದಲ ಬಾರಿಗೆ ಆಗಮಿಸಿದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರಿಗೆ‌ ಆನೆ ಚೌಕೂರು ಗೇಟ್ ಬಳಿ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಸಾರ್ವಜನಿಕರ ವತಿಯಿಂದ ಅದ್ಧೂರಿ ಸ್ವಾಗತ ಕೋರಲಾಯಿತು.

  

ಮಾನ್ಯ ಶಾಸಕರ ಧರ್ಮಪತ್ನಿ ಕಾಂಚನ್ ಪೊನ್ನಣ್ಣ ಅವರು, ಶಾಸಕರ ಜೇಷ್ಠ ಸಹೋದರ ನರೇನ್ ಕಾರ್ಯಪ್ಪ ರವರೊಂದಿಗೆ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಅರುಣ್ ಮಾಚಯ್ಯ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಶ್ರೀ ಮಿದೇರೀರ ನವೀನ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಶ್ರೀ ಪಟ್ಟಡ ರಂಜಿ ಪೂಣಚ್ಚ, ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಇಸ್ಮಾಯಿಲ್, ಹಾಗೂ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಸರಕಾರಿ ನಾಮನಿರ್ದೇಶಿತ ಅಧ್ಯಕ್ಷರುಗಳು/ಪದಾಧಿಕಾರಿಗಳು, ವಲಯ ಮಟ್ಟದ ಅಧ್ಯಕ್ಷರುಗಳು/ಪದಾಧಿಕಾರಿಗಳು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಒಬಿಸಿ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಎಸ್ ಸಿ ಘಟಕದ ಅಧ್ಯಕ್ಷರುಗಳು,ಪದಾಧಿಕಾರಿಗಳು, ಮಹಿಳಾ ಘಟಕದ ಅಧ್ಯಕ್ಷರುಗಳು,ಪದಾಧಿಕಾರಿಗಳು, ಯುವ ಕಾಂಗ್ರೆಸ್ ಅಧ್ಯಕ್ಷರು,ಸದಸ್ಯರು,ಪದಾಧಿಕಾರಿಗಳು, ಹಾಗೂ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದು, ಶಾಸಕರನ್ನು ಅದ್ಧೂರಿಯಾಗಿ ಜಿಲ್ಲೆಗೆ ಬರಮಾಡಿಕೊಳ್ಳಲಾಯಿತು.

  ಬಳಿಕ ಗೋಣಿಕೊಪ್ಪ ಬಸ್ ನಿಲ್ದಾಣದ ಬಳಿ ಪಕ್ಷದ ಮುಖಂಡರುಗಳು ಶಾಸಕರನ್ನು ಆತ್ಮೀಯವಾಗಿ ಸಾರ್ವಜನಿಕರ ಸಮ್ಮುಖದಲ್ಲಿ ಸನ್ಮಾನಿಸಿದರು. ಸನ್ಮಾನದ ಬಳಿಕ ಮಾತನಾಡಿದ ಪಕ್ಷದ ಮುಖಂಡರುಗಳು ಶಾಸಕರ ಬದ್ಧತೆ ಹಾಗೂ ಜನಪರ ಕಾಳಜಿಯನ್ನು ಮೆಚ್ಚಿ ಹಾಗೂ ಮಾನ್ಯ ಶಾಸಕರು ಕೇವಲ ಎರಡು ವರ್ಷದಲ್ಲಿ, ದಶಕಗಳಿಂದ ಕಾಡುತ್ತಿದ್ದ ಜನರ ಸಮಸ್ಯೆಯನ್ನು ಬಗೆಹರಿಸಿ ತಮ್ಮ ಜನಪರ ಕಾಳಜಿ ಸಾಮಾಜಿಕ ಚಿಂತನೆ ಹಾಗೂ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದ್ದಾರೆ ಎಂದು ಬಣ್ಣಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0