ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಆದಂ ಎಸ್. ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಆದಂ ಎಸ್. ನೇಮಕ

ಕುಶಾಲನಗರ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯಂತೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಶಿಫಾರಸ್ಸಿನ ಮೇರೆಗೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯಾಧ್ಯಕ್ಷ ಡಾ.ಸಿ.ಇ.ರಂಗಸ್ವಾಮಿ ಅವರ ಆದೇಶದ ಮೇರೆಗೆ ಕುಶಾಲನಗರದ ಆದಂ.ಎಸ್. ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ನೇಮಿಸಲಾಗಿತ್ತು. ಇಂದು ಮಡಿಕೇರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಆದಂ.ಎಸ್. ಅವರಿಗೆ ಆದೇಶ ಪತ್ರ ನೀಡಿದರು.

ಈ ಸಂದರ್ಭ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಮೆರೋಜ್ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಸೇರಿದಂತೆ ಪಕ್ಷದ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಹಾಜರಿದ್ದರು.