Kodagu

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ 2024 ನೇ ವರ್ಷದ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

admincoorgdaily

ಮಡಿಕೇರಿ:-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2024 ನೇ ವರ್ಷದ ಗೌರವ ಪ್ರಶಸ್ತಿಗೆ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಕಲೆ, ಮತ್ತು ಅಧ್ಯಯನ ಮುಂತಾದ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತಲಾ ಒಬ್ಬರಂತೆ 3 ಜನ ಸಾಧಕರನ್ನು ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸ್ವತ: ಸಾಧಕರು ಸಲ್ಲಿಸುವುದು ಅಥವಾ ಅವರ ಅಭಿಮಾನಿಗಳು ಶಿಫಾರಸ್ಸುಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಇವರು ಸಲ್ಲಿಸಿರುವ ಸೇವೆ ಮತ್ತು ಸಾಧನೆ ಬಗ್ಗೆ ಮಾಹಿತಿಗಳನ್ನು ಅರ್ಜಿಯ ಜೊತೆಗೆ ಅಕಾಡೆಮಿಗೆ ಒದಗಿಸುವುದು. ಈ ಸಂಬಂಧ ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿಯ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ವ್ಯಕ್ತಿ ಪರಿಚಯ ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇದೇ ಸೆಪ್ಟೆಂಬರ್ 11 ಕೊನೆ ದಿನವಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ "ಗೌರವ ಪ್ರಶಸ್ತಿ 2024-ಯೋಜನೆ" ಎಂದು ಬರೆದು ಅರ್ಜಿ ವಿವರಗಳನ್ನು ಅಧ್ಯಕ್ಷರು/ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ-ಕೃಪ ಕಟ್ಟಡ, 1ನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ 571201. ದೂ.ಸಂ.08272-223055, ಮೊಬೈಲ್ ಸಂಖ್ಯೆ 6362522677 ಈ ವಿಳಾಸಕ್ಕೆ ಕಳುಹಿಸಿಕೊಡುವುದು. ಹೆಚ್ಚಿನ ಮಾಹಿತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಿಂದ ಪಡೆದುಕೊಳ್ಳಬಹುದು.