ಸಾಬು ವರ್ಗಿಸ್ ಹಾಗೂ ಅನಿಲ್ ಕುಮಾರ್ ಗೆ ಕರ್ನಾಟಕ ಸೇವಾ ರತ್ನ ರಾಜ್ಯ ಪ್ರಶಸ್ತಿ

ಸಾಬು ವರ್ಗಿಸ್ ಹಾಗೂ ಅನಿಲ್ ಕುಮಾರ್ ಗೆ ಕರ್ನಾಟಕ ಸೇವಾ ರತ್ನ ರಾಜ್ಯ ಪ್ರಶಸ್ತಿ

ಸಿದ್ದಾಪುರ :- 2022-23 ನೇ ಸಾಲಿನಲ್ಲಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿಸಿ ಜಿಲ್ಲೆ,ರಾಜ್ಯ ಮಟ್ಟದ ಅತ್ಯುತ್ತಮ ಪ್ರಶಸ್ತಿ ಪಡೆದ ಗ್ರಾಮ ಪಂಚಾಯಿತಿ ಈ ಹಿಂದಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಬು ವರ್ಗಿಸ್ ಹಾಗು ಅಭಿವೃದ್ಧಿ ಅಧಿಕಾರಿ ಎಚ್ ಎಸ್ ಅನಿಲ್ ಕುಮಾರ್ ಅವರಿಗೆ ಕರ್ನಾಟಕ ಕನ್ನಡ ಸೇವಾ ರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಸಮಾಜ ಸೇವಾ ಸಂಸ್ಥೆಯ ಜಾಗೃತಿ ಟ್ರಸ್ಟ್ ವತಿಯಿಂದ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತು ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ಸಾಬು ವರ್ಗಿಸ್ ಹಾಗೂ ಅಂದಿನ ಅಭಿವೃದ್ಧಿ ಅಧಿಕಾರಿಯಾಗಿ ಇದೀಗ ಪಿರಿಯಪಟ್ಥಣ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್ ಎಸ್ ಅನಿಲ್ ಕುಮಾರ್ ಅವರಿಗೆ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ, ಕರ್ನಾಟಕ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ ಸಿ ಸೋಮಶೇಖರ್, ಖ್ಯಾತ ಗಾಯಕ ಶಶಿಧರ ಕೋಟೆ ಸೇರಿದಂತೆ ಗಣ್ಯರು ಸನ್ಮಾನಿಸಿ ಗೌರವಿಸಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಗ್ರಾಮದ ಸಾಬು ವರ್ಗಿಸ್ ಸಮಾಜ ಸೇವಕರಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಗ್ರಾಮ ಅಭಿವೃದ್ಧಿ ಹಾಗೂ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಗ್ರಾಮ ಪಂಚಾಯಿತಿ,ಡಿಜಿಟಲ್ ಗ್ರಂಥಾಲಯ ಮಾದರಿ ಎಂಬ ಹೆಗ್ಗಳಿಕೆಯೊಂದಿಗೆ ಜಿಲ್ಲೆ,ರಾಜ್ಯ ಮಟ್ಟದ ಹಲವಾರು ಪ್ರಶಸ್ತಿಗಳು ಪಡೆದುಕೊಂಡಿದ್ದಾರೆ.

ಸುಸ್ಥಿರ ಅಭಿವೃದ್ಧಿ ಸಾಧನೆಯ ವಿಷೇಶವಾಗಿ ಕರ್ನಾಟಕ ದಿಂದ 3 ಗ್ರಾಮ ಪಂಚಾಯಿತಿಗಳ ಪೈಕಿ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಯಿಂದ ಅಂದಿನ ಅಧ್ಯಕ್ಷ ಸಾಬು ವರ್ಗಿಸ್ ಪಂಜಾಬ್ ರಾಜ್ಯದ ರಾಜಧಾನಿ ಚೆಂಡಿಘಡ್ ಗೆ ವಿಶೇಷ ಪ್ರತಿನಿಧಿಯಾಗಿ ತೆರಳಿ ದೇಶದ ನಾನಾ ಭಾಗಗಳಿಂದ ಆಗಮಿಸಿದ ಪ್ರತಿನಿಧಿಗಳೊಂದಿಗೆ ಸುಸ್ಥಿರ ಅಭಿವೃದ್ಧಿಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇವೆಯ ಸಂದರ್ಭದಲ್ಲಿ ಉದ್ಯೋಗ ಖಾತ್ರಿ, ತೆರಿಗೆ ವಸೂಲಿ,ಯೋಜನೆಗಳ ಅನುಷ್ಠಾನ ಸೇರಿದಂತೆ ಜಿಲ್ಲೆ, ರಾಜ್ಯ ಮಟ್ಟ ಸೇರಿದಂತೆ ಹಲವು ಪ್ರಶಸ್ತಿಯನ್ನ ಅನೀಲ್ ಕುಮಾರ್ ಪಡೆದುಕೊಂಡಿದ್ದಾರೆ.