Kodagu

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಪೊನ್ನಂಪೇಟೆ ತಾಲೂಕು ವತಿಯಿಂದ ಪ್ರೌಢಶಾಲಾ ಮಕ್ಕಳಿಗೆ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆ

admincoorgdaily

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಪೊನ್ನಂಪೇಟೆ ತಾಲೂಕು ವತಿಯಿಂದ ಪ್ರೌಢಶಾಲಾ ಮಕ್ಕಳಿಗೆ ಆನ್ಲೈನ್ ದೇಶಭಕ್ತಿ ಗೀತೆ    ಸ್ಪರ್ಧೆ

ಮಡಿಕೇರಿ; ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಪೊನ್ನಂಪೇಟೆ ತಾಲೂಕು ಘಟಕದ ವತಿಯಿಂದ, ಕೊಡಗು ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸ್ಪರ್ಧೆಯು ಪೊನ್ನಂಪೇಟೆ ತಾಲೂಕು ವ್ಯಾಪ್ತಿಗೆ ಸೀಮಿತವಾಗಿ ನಡೆಯಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳು ಎಂಟರಿಂದ ಹತ್ತನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಆಸಕ್ತ ವಿದ್ಯಾರ್ಥಿಗಳು, ತಮ್ಮ ಹೆಸರು, ಶಾಲೆ ಮತ್ತು ತರಗತಿಯನ್ನು ಉಲ್ಲೇಖಿಸಿ, ಯಾವುದೇ ಮ್ಯೂಸಿಕ್ ಬಳಸದೆ, 4ನಿಮಿಷದ ಒಳಗಾಗಿ ಹಾಡಿ, ರೆಕಾರ್ಡ್ ಮಾಡಿದ ವಿಡಿಯೋವನ್ನು ಚೇಂದಿರ ರಮ್ಯಾ ಜಗನ್ ರವರ ವಾಟ್ಸಾಪ್ ಸಂಖ್ಯೆ 8550833420 ಗೆ ದಿನಾಂಕ 05/02/2026ರ ಒಳಗಾಗಿ ತಲುಪುವಂತೆ ಕಳುಹಿಸಬಹುದು.

 ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಎಲ್ಲರಿಗೂ, ಡಿಜಿಟಲ್ ಅಭಿನಂದನಾಪತ್ರ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಪೊನ್ನಂಪೇಟೆ ತಾಲೂಕು ಕಾರ್ಯದರ್ಶಿಯಾದ ನಳಿನಿ ಹೆಚ್ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.