ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಕೊಡಗು ಜಿಲ್ಲಾಧ್ಯಕ್ಷರಾಗಿ ಸತೀಶ್, ಉಪಾಧ್ಯಕ್ಷರಾಗಿ ಸಿರಾಜ್ ನೇಮಕ

ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಕೊಡಗು ಜಿಲ್ಲಾಧ್ಯಕ್ಷರಾಗಿ ಸತೀಶ್, ಉಪಾಧ್ಯಕ್ಷರಾಗಿ ಸಿರಾಜ್ ನೇಮಕ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು : ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು ಕೊಡಗು ಜಿಲ್ಲಾಧ್ಯಕ್ಷರಾಗಿ ವಿ.ಎಸ್. ಸತೀಶ್ ಹಾಗೂ ಉಪಾಧ್ಯಕ್ಷರಾಗಿ ವಿ.ಎ.ಸಿರಾಜ್ ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ನ ಮುಖ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯಾಧ್ಯಕ್ಷರಾದ ರವಿ ಶೆಟ್ಟಿ ಬೈಂದೂರ್ ಅವರು ಕೊಡಗು ಜಿಲ್ಲಾಧ್ಯಕ್ಷರಾಗಿ ವಿರಾಜಪೇಟೆ ಹೆಗ್ಗಳ ಗ್ರಾಮದ ಸತೀಶ್ ಹಾಗೂ ಉಪಾಧ್ಯಕ್ಷರಾಗಿ ಕಕ್ಕಬ್ಬೆ ಕುಂಜಿಲ ಗ್ರಾಮದ ಸಿರಾಜ್ (ಸಿರಾ) ಅವರನ್ನು ನೇಮಕಮಾಡಿ ಆದೇಶಿಸಿದ್ದಾರೆ.