ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರವೇಶಾತಿಗೆ ಅರ್ಜಿ ಆಹ್ವಾನ
admincoorgdaily

ಮಡಿಕೇರಿ:-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2026-27ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯು.ಜಿ.ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ.
ಯುಜಿಸಿ ನಿಯಮಗಳ ಪ್ರಕಾರ ಎರಡು ಶೈಕ್ಷಣಿಕ ಕಾರ್ಯಕ್ರಮಗಳನ್ನು (ಪ್ರೋಗ್ರಾಂಗಳನ್ನು) ಏಕ ಕಾಲದಲ್ಲಿ ಓದಲು ಅವಕಾಶವಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೇದುಕೊಳ್ಳುವುದು. ಯುಜಿಸಿ ಮಾನ್ಯತೆ ಹೊಂದಿದ ಶೈಕ್ಷಣಕ್ರಮಗಳಿಗೆ 2026-27 ಜುಲೈ ಆವೃತ್ತಿಗೆ ನೇರ ಪ್ರವೇಶಾತಿಯನ್ನು ಒಳಗೊಂಡಂತೆ ಪ್ರಥಮ ವರ್ಷದ ಒಡಿಎಲ್ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ ಬಿ.ಎ, ಬಿ.ಕಾಂ, ಬಿ.ಲಿಬ್ ಐಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ ಹಾಗು ಸ್ನಾತಕೋತ್ತರ ಪಿ.ಜಿ. ಕೋಸ್ರ್ಗಳಾದ ಎಂ.ಎ, ಎಂ.ಎ-ಪತ್ರಿಕೋದ್ಯಮ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್‍ಐ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲೂ [ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್]2026-27 ರ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯಿಂದ ಹೊಸದಾಗಿ ಪ್ರಾರಂಭಿಸಿರುವ ಜ್ಯೋತಿರ್‍ವಿಜ್ಞಾನ [ಪಲ ಜ್ಯೋತಿಷ್ಯ, ಮೇಧಿನಿ ಜ್ಯೋತಿಷ್ಯ ವಾಸ್ತು ಜ್ಯೋತಿಷ್ಯ] ಮತ್ತು ಲಿಂಗ್ವಿಸ್ಟಿಕ್ಸ್ ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿರುತ್ತದೆ.
ಪ್ರವೇಶಾತಿಗೆ ಎಸ್.ಎಸ್.ಲ್.ಸಿ ಅಂಕಪಟ್ಟಿ ಜೆರಾಕ್ಸ್. ಪಿ.ಯು.ಸಿ ಅಥವಾ ತತ್ಸಮಾನ ಅಂಕಪಟ್ಟಿ ಜೆರಾಕ್ಸ್. ಪದವಿ ಅಂಕಪಟ್ಟಿ ಜೆರಾಕ್ಸ್ (ಎಲ್ಲಾ ವರ್ಷಗಳ ಅಥವಾ ಎಲ್ಲಾ ಸೆಮಿಸ್ಟರ್‍ಗಳು), ಆಧಾರ್ ಕಾರ್ಡ್ ಜೆರಾಕ್ಸ್. ಬ್ಯಾಂಕ್ ಖಾತೆ ವಿವರಗಳು, ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕ್ ಖಾತೆ ಹೋಲ್ಡರ್ ಹೆಸರು, ಬ್ಯಾಂಕ್‍ನ ಹೆಸರು, IFSC ಕೋಡ್. ನಾಲ್ಕು ಫೋಟೋಗಳು. ದೂರವಾಣಿ ಸಂಖ್ಯೆ, ವಿದ್ಯಾರ್ಥಿ ಇ-ಮೇಲ್ ಐಡಿ, ಬಿಪಿಎಲ್ ಕಾರ್ಡ್ (ಮಹಿಳೆಯರಿಗೆ ಮಾತ್ರ). ಎಟಿಎಂ ಕಾರ್ಡ್, ಫೋನ್ ಪೇ, ಗೂಗಲ್ ಪೇ, ನೆಟ್ ಬ್ಯಾಂಕಿಂಗ್ - ಶುಲ್ಕ ಪಾವತಿಗಾಗಿ. ಹೆಚ್ಚಿನ ಮಾಹಿತಿಗೆ ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಲು ಕೋರಿದೆ. ಹಾಗೆಯೇ ದೂ.ಸಂ. 8296215714, 9483570900, 9844395986 ಮುಖಾಂತರ ವಿವರ ಪಡೆಯಬಹುದಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕರು ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.