ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಉಚಿತ ಪದವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
ಮಡಿಕೇರಿ ಜು.22:-ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ನೀಡಲಾಗುವ ದೂರ ಶಿಕ್ಷಣ ಮಾದರಿಯ ಉಚಿತ ಪದವಿ/ಸ್ನಾತ್ತಕೋತ್ತರ ಪದವಿ ಕೋರ್ಸುಗಳಿಗೆ ಆನ್‍ಲೈನ್‍ನ https://dom.karnataka.gov.in ಮತ್ತು https://minority.ksouportal.com ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಭ್ಯರ್ಥಿಯು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು (ಮುಸ್ಲಿಂ, ಜೈನ್ ಬೌದ್ದ, ಸಿಖ್ ಮತ್ತು ಪಾರ್ಸಿ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಒಟ್ಟು ಆದಾಯ ರೂ.8 ಲಕ್ಷಗಳನ್ನು ಮೀರಬಾರದು. ಅಭ್ಯರ್ಥಿಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಿಯಮಗಳ ಅನುಸಾರ ಕನಿಷ್ಟ ಶೈಕ್ಷಣಿಕ ಅರ್ಹತೆಯನ್ನು ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸರ್ಕಾರಿ ನೌಕರರಾಗಿರಬಾರದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹಿಂದಿನ ಸಾಲಿನಲ್ಲಿ ಈ ಯೋಜನೆ ಅಡಿಯಲ್ಲಿ ಪ್ರವೇಶಾತಿಯನ್ನು ಪಡೆದಿರಬಾರದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಯಾವುದೇ ಕೋರ್ಸಿನಲ್ಲಿ ಪ್ರಸ್ತುತ ಪ್ರವೇಶಾತಿಯನ್ನು ಪಡೆದಿರಬಾರದು.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 08272-225528/ 220214 ಹಾಗೂ ಅಲ್ಪಸಂಖ್ಯಾತರ ಸಹಾಯಕವಾಣಿ ಸಂಖ್ಯೆ: 8277799990, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಾಯವಾಣಿ ಸಂಖ್ಯೆ 8690544522, 944866880, 9945366062, 9113512565, 9611418726, 9686576399, 9035395137, 8123469017, 9844010407 ನ್ನು ಹಾಗೂ ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂ.ಸಂ. 8548068519, ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂರವಾಣಿ ಸಂಖ್ಯೆ 9900731037 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ 9972799091 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿ.ಎಸ್.ಸಚಿನ್ ಅವರು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
