ಚಾರಣ ಹಾಗು ಪ್ರವಾಸಿಗರ ಮೇಲೆ ನಿಗಾ ವಹಿಸಲಿ :ವಿಜು ಸುಬ್ರಮಣಿ
ಪಾಲಿಬೆಟ್ಟ:-ಹೊರ ರಾಜ್ಯಗಳಿಂದ ಆಗಮಿಸುವ ಚಾರಣಿಗರು ಹಾಗೂ ಪ್ರವಾಸಿಗರ ಮೇಲೆ ಜಿಲ್ಲಾಡಳಿತ ನಿಗಾ ವಹಿಸಬೇಕೆಂದು ಮಾಜಿ ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿಯ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ಒತ್ತಾಯಿಸಿದ್ದಾರೆ.
ಪ್ರಕೃತಿ ಸೌಂದರ್ಯದಿಂದ ಕೂಡಿರುವ ಕೊಡಗು ಜಿಲ್ಲೆಗೆ ಕಪ್ಪು ಚುಕ್ಕೆ ತರುವ ನಿಟ್ಟಿನಲ್ಲಿ ಕೆಲವು ಚಾರಣಿಗರು ಹಾಗೂ ಪ್ರವಾಸಿಗರು ಮಾಡುತ್ತಿದ್ದು ನಿಯಮ ಪಾಲನೆ ಮಾಡದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದರ ಮೂಲಕ ಎಚ್ಚರಿಕೆ ನೀಡಬೇಕು. ಇತ್ತೀಚೆಗೆ ತಡಿಯಂಡಮೋಳ್ ಬೆಟ್ಟದಲ್ಲಿ ಕಾಣೆಯಾಗಿ ಪತ್ತೆಯಾದ ಶರಣ್ಯ ಅರಣ್ಯ ಇಲಾಖೆಯ ನಿಯಮಗಳನ್ನು ಪಾಲನೆ ಮಾಡದೆ ನಿಗೂಢವಾಗಿ ನಾಪತ್ತೆಯ ನಾಟಕವಾಗಿದ್ದು ಸೂಕ್ತ ತನಿಖೆ ನಡೆಸುವುದರ ಮೂಲಕ ಕ್ರಮ ಕೈಗೊಳ್ಳಬೇಕು.
ಕೆಲವು ಪ್ರವಾಸಿಗರು ಧಾರ್ಮಿಕ ಸ್ಥಳಗಳಲ್ಲಿ ಮೋಜು ಮಸ್ತಿ ಯಲ್ಲಿ ತೊಡಗಿಸಿಕೊಂಡು ಪವಿತ್ರ ಸ್ಥಳಗಳಿಗೆ ದಕ್ಕೆ ತರುತ್ತಿದ್ದಾರೆ ಅಂಥವರ ಮೇಲು ಸೂಕ್ತ ಕ್ರಮ ಕೈಗೊಳ್ಳಬೇಕು. ಜಿಲ್ಲೆಗೆ ಆಗಮಿಸುವ ಕೆಲ ಪ್ರವಾಸಿಗರಿಂದ ಪರಿಸರ ನೈರ್ಮಲ್ಯಕ್ಕೆ ದಕ್ಕೆಯಾಗುತ್ತಿದ್ದು ಎಲ್ಲೆಂದರಲ್ಲಿ ಮಧ್ಯದ ಬಾಟಲಿಗಳು, ತ್ಯಾಜ್ಯ, ಪ್ಲಾಸ್ಟಿಕ್ ವಸ್ತುಗಳನ್ನು ಎಸೆಯುತಿದ್ದು ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು.