ಕೆಂಪೇಗೌಡ ಜಯಂತಿ: 5ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ

Jul 12, 2026 - 11:36
 0  439
ಕೆಂಪೇಗೌಡ ಜಯಂತಿ: 5ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ

ಗೋಣಿಕೊಪ್ಪ:ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಮತ್ತು ಹಾತೂರು ಒಕ್ಕಲಿಗರ ಸಂಘ (ರಿ) ಇವರ ಸಹಯೋಗದೊಂದಿಗೆ, ಕೆಂಪೇಗೌಡ ಜಯಂತಿಯ ಪ್ರಯುಕ್ತ ಆಯೋಜಿಸಿದ ಐದನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಪರವಾಗಿ ಅವರ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು ಭಾಗವಹಿಸಿದರು.

ಕ್ರೀಡಾಕೂಟವನ್ನು ಉದ್ಘಾಟಿಸುತ್ತಾ ಶುಭಕೋರಿ ಮಾತನಾಡಿದ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು, ಮಾನ್ಯ ಶಾಸಕರು ತುರ್ತು ಕಾರ್ಯ ಒತ್ತಡದಿಂದಾಗಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲು ಸಾಧ್ಯವಾಗದೇ ಇದ್ದುದರಿಂದ ಅವರ ಪರವಾಗಿ ತನ್ನನ್ನು ಇಲ್ಲಿ ಭಾಗವಹಿಸಲು ಹೇಳಿದ್ದಾಗಿ ತಿಳಿಸಿದರು.

ಕ್ರೀಡಾಕೂಟ ಆಯೋಜನೆ ಬಗ್ಗೆ ಹಾಗೂ ಗ್ರಾಮೀಣ ಕ್ರೀಡಾಕೂಟಕ್ಕೆ ಪ್ರೋತ್ಸಾಹ ನೀಡುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು, ಮಾನ್ಯ ಶಾಸಕರು ನೀಡಿದ ಶುಭ ಸಂದೇಶವನ್ನು ಆಯೋಜಕರಿಗೆ ತಿಳಿಸಿದರಲ್ಲದೆ ಕ್ರೀಡಾಕೂಟವು ಅತ್ಯಂತ ಯಶಸ್ಸಾಗಿ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.

 ವಿರಾಜಪೇಟೆ ಮತ್ತು ಪೊನ್ನಂಪೇಟೆ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷರಾದ ಶ್ರೀ ಮಧುಸೂಧನ್ ವಿ ಜಿ, ಕೆಸರುಗದ್ದೆ ಕ್ರೀಡಾಕೂಟದ ಅಧ್ಯಕ್ಷರು ಹೆಚ್ ಡಿ ಶ್ರೀನಿವಾಸ, ಹಾತೂರು ಒಕ್ಕಲಿಗ ಸಂಘದ ಅಧ್ಯಕ್ಷರಾದ ಎಚ್ ಜಿ ಅನಿಲ್ ಕುಮಾರ್ , ದೊಡ್ಡಮನೆ ಕೀರ್ತಿ ಕುಮಾರ್, ಒಕ್ಕಲಿಗ ಸಂಘದ ಸದಸ್ಯರು, ಪದಾಧಿಕಾರಿಗಳು, ಕ್ರೀಡಾ ಪ್ರೇಮಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0