Kodagu

ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳದ ಮಹಿಳೆ ನಾಪತ್ತೆ ಪ್ರಕರಣ; ಪೊಲೀಸ್, ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರು ಸೇರಿದಂತೆ,4 ತಂಡಗಳಿಂದ ಬಿರುಸಿನ ಶೋಧ ಕಾರ್ಯ

admincoorgdaily

ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳದ ಮಹಿಳೆ ನಾಪತ್ತೆ ಪ್ರಕರಣ;  ಪೊಲೀಸ್,  ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರು ಸೇರಿದಂತೆ,4 ತಂಡಗಳಿಂದ ಬಿರುಸಿನ  ಶೋಧ ಕಾರ್ಯ

ನಾಪೋಕ್ಲು;ಕೊಡಗು ಜಿಲ್ಲೆಯ ಕಕ್ಕಬ್ಬೆ ಬಳಿಯ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿದ್ದಾಳೆ. ದಟ್ಟ ಮಳೆಮೋಡ, ಕಡಿದಾದ ಹಾದಿ ಮತ್ತು ಕಾಡಾನೆಗಳ ಹಾವಳಿಯ ಮಧ್ಯೆ ಪೊಲೀಸರು, ಅರಣ್ಯ ಇಲಾಖೆ ಹಾಗೂ ಶ್ವಾನ ದಳದ ನಾಲ್ಕು ತಂಡಗಳು ಆಕೆಯ ಪತ್ತೆಗೆ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಅವರ ಸುರಕ್ಷಿತ ಮರಳುವಿಕೆಗೆ ಸ್ಥಳೀಯರು ದೇವರ ಮೊರೆ ಹೋಗಿದ್ದು, ಹರಕೆಯನ್ನೂ ಹೊತ್ತಿದ್ದಾರೆ.