ಕ್‌ಗ್ಗಟ್‌ನಾಡ್ ಕೊಡವ ಸಂಘದ 5ನೇ ವರ್ಷದ ಒತ್ತೋರ್ಮೆ ಕೂಟ: ಆಧುನಿಕತೆಗೆ ಹೊಂದಿಕೊಂಡು ಸಂಸ್ಕೃತಿಯನ್ನು ಪೋಷಿಸುವುದು ನಮ್ಮೆಲ್ಲರ ಪ್ರಮುಖ ಜವಾಬ್ದಾರಿ: ಶಾಸಕ ಎ.ಎಸ್ ಪೊನ್ನಣ್ಣ ಅಭಿಪ್ರಾಯ
ಬೆಂಗಳೂರು:ಬೆಂಗಳೂರಿನಲ್ಲಿರುವ ವಾಸವಿರುವ ಕ್‌ಗ್ಗಟ್‌ನಾಡ್ ಕೊಡವ ಸಂಘದ 5ನೇ ವರ್ಷದ ಒತ್ತೋರ್ಮೆ ಕೂಟ, ಬೆಂಗಳೂರು ಕೊಡವ ಸಮಾಜದ, ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ಭಾಗವಹಿಸಿ ಶುಭ ಕೋರಿದರು.
ಮಾತನಾಡಿದ ಶಾಸಕರು, ಕೊಡಗಿನ ಹಾಗೂ ಕೊಡವರ ಸಂಸ್ಕೃತಿಯನ್ನು ಉಳಿಸಿ, ಬೆಳೆಸಿ, ನಾಡಿನದ್ಯಂತ ಪ್ರಸರಿಸಲು ಇಂತಹ ಸಮ್ಮಿಲನ ಕಾರ್ಯಕ್ರಮವು ಪ್ರಮುಖ ಪಾತ್ರ ವಹಿಸುತ್ತದೆ. ಇಂದಿನ ಯುವ ಪೀಳಿಗೆಯ ಮೇಲೆ ನಮ್ಮ ಸಂಸ್ಕೃತಿ ಪರಂಪರೆ ಹಾಗೂ ಆಚರಣೆಗಳನ್ನು ಮುಂದುವರಿಸುವ ಗುರುತರ ಜವಾಬ್ದಾರಿ ಇದೆ. ಆಧುನಿಕತೆಗೆ ಹೊಂದಿಕೊಂಡು ನಮ್ಮ ಸಂಸ್ಕೃತಿಯನ್ನು ಪೋಷಿಸುವುದು ನಮ್ಮೆಲ್ಲರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು. ನಾಡಿನ ಏಳಿಗೆಗಾಗಿ ತನ್ನ ಕೈಲಾದ ಎಲ್ಲಾ ರೀತಿಯ ಸಹಾಯ ಮಾಡುವುದಾಗಿ ಇದೇ ಸಂದರ್ಭದಲ್ಲಿ ಶಾಸಕರು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರಿಗೂ ಹಾಗೂ ಹಿರಿಯ ಪತ್ರಕರ್ತರಾದ ಎಂ. ಎ. ಪೊನ್ನಪ್ಪ ಅವರನ್ನು ಸನ್ಮಾನಿಸಲಾಯಿತು. ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು, ಕ್‌ಗ್ಗಟ್‌ನಾಡ್ ಕೊಡವ ಸಂಘದ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.