ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ಶಿಕ್ಷಕಿ ಕೆ.ಕೆ ಸುಷಾ ಆಯ್ಕೆ

Mar 5, 2026 - 23:55
Mar 5, 2026 - 23:55
 0  653
ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ  ಶಿಕ್ಷಕಿ ಕೆ.ಕೆ ಸುಷಾ ಆಯ್ಕೆ
ಶಿಕ್ಷಕಿ ಸುಷಾ

ಮಡಿಕೇರಿ :ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನ ಮಾದರಿ ಶಾಲೆಯನ್ನಾಗಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಗುರುತಿಸಿ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ ವಿಜಯಪುರ ರಾಜ್ಯ ಘಟಕ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರನ್ನ ಗೌರವಿಸಲು ನೌಕರರ ಸಂಘ ಮುಂದಾಗಿದ್ದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಕೆ ಕೆ ಸುಷಾ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ನೀಡಲು ಆಯ್ಕೆ ಮಾಡಿದ್ದಾರೆ.

ಮಾರ್ಚ್ 8 ರಂದು ವಿಜಯಪುರದ ಎಸ್ ಎಸ್ ರೋಡ್ ನಲ್ಲಿರುವ ಶ್ರೀ ಶಿವಾನುಭವ ಮಂಟಪ ಶ್ರೀ ಸಿದ್ದೇಶ್ವರ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಲ್ಲಿದ್ದು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ ವಿಜಯಪುರದ ಘಟಕದ ಅಧ್ಯಕ್ಷೆ ಲತಾ ಮಾ ಬಿರುದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪ್ರಗತಿಗೆ ಶಾಲಾ ಹಂತದಲ್ಲಿ ಕೈಗೊಂಡ ವಿಶಿಷ್ಟ ಕಾರ್ಯಕ್ರಮಗಳು ಹಾಗೂ ಸೇವಾ ಸಾಧನೆಯನ್ನು ಪರಿಗಣಿಸಿ ಕೊಡಗು ಜಿಲ್ಲಾ ಶಾಲಾ ಶಿಕ್ಷಣ, ಸಾಕ್ಷರತೆ ಇಲಾಖೆಯಿಂದ ನೀಡುವ ಜಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ,ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಶಿಕ್ಷಣ ಸಿಂಧು ಪ್ರಶಸ್ತಿ, ಶಿಕ್ಷಣ ಸಾರಥಿ, ಶಿಕ್ಷಕ ಸಿರಿ ಸೇರಿದಂತೆ ಇತ್ತೀಚೆಗೆ ಕಾವೇರಿ ರತ್ನ ಪ್ರಶಸ್ತಿ ಪಡೆದುಕೊಂಡಿದ್ದರು ಇದರೊಂದಿಗೆ ವಿವಿಧ ಸಂಘ ಸಂಸ್ಥೆಗಳಿಂದಲೂ ಪ್ರಶಸ್ತಿ, ಸನ್ಮಾನ ಗೌರವಲಭಿಸಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0