Voice of Youth Kodagu" ವ್ಯಾಟ್ಸ್ ಅಪ್ ಗ್ರೂಪಿನ ಬಗ್ಗೆ ಪೊಲೀಸ್ ಎಸ್ಪಿಗೆ ದೂರು ನೀಡಿದ ಕೊಡಗು ಬಿಜೆಪಿ
" ಮಡಿಕೇರಿ:ವಾಟ್ಸ್ಯಾಪ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ "Voice of Youth Kodagu" ಎಂಬ ಗುಂಪಿನಲ್ಲಿ ನಡೆಯುತ್ತಿರುವ ಚರ್ಚೆಗಳಲ್ಲಿ ಸಮಾಜದಲ್ಲಿ ಅಶಾಂತಿ ಹಾಗೂ ಗಲಭೆಗೆ ಪ್ರಚೋದನೆ ನೀಡುವಂತಹ ವಿಚಾರಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಗಂಭೀರವಾಗಿ ಗಮನಹರಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾ ಬಿಜೆಪಿ ಮನವಿ ಸಲ್ಲಿಸಿದ್ದಾರೆ.
ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಮತ್ತು ಯಾವುದೇ ರೀತಿಯ ಅಕ್ರಮ ಪ್ರತಿಭಟನೆ ಅಥವಾ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿಯಲ್ಲಿ ಕೋರಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಮತ್ತು ದ್ವೇಷ ಸಂದೇಶಗಳನ್ನು ಹರಡಿ ಜಿಲ್ಲೆಯಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ,ಪ್ರಧಾನ ಕಾರ್ಯದರ್ಶಿ ವಿ.ಕೆ ಲೋಕೇಶ್, ವಕ್ತಾರ ಶಾಂತೆಯಂಡ ರವಿ ಕುಶಾಲಪ್ಪ, ಎಡಿಕೇರಿ ಪ್ರಸನ್ನ , ಹರಪಳ್ಳಿ ರವೀಂದ್ರ,ಮತ್ತಿತರರು ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
