ಕೊಡಗು;ಆನೆ ದಾಳಿಗೆ ಕಾಫಿ ಬೆಳೆಗಾರ ಸಾವು: ಈಶ್ವರ ಖಂಡ್ರೆ ಸಂತಾಪ

ಕೊಡಗು;ಆನೆ ದಾಳಿಗೆ ಕಾಫಿ ಬೆಳೆಗಾರ ಸಾವು: ಈಶ್ವರ ಖಂಡ್ರೆ ಸಂತಾಪ

ಬೆಂಗಳೂರು;ಕೊಡಗಿನಲ್ಲಿ ಇಂದು ಕಾಡಾನೆ ದಾಳಿಯಿಂದ ಕಾಫಿ ಬೆಳೆಗಾರರೊಬ್ಬರು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಮಾನವ- ಆನೆ ಸಂಘರ್ಷ ತಡೆಯಲು ಸರ್ಕಾರ ಮತ್ತು ಇಲಾಖೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದೆ. ಜೀವಕ್ಕೆ ಬೆಲೆ ನೀಡಲು ಸಾಧ್ಯವೆ ಇಲ್ಲ. ಈ ನೋವಿನ ಸಂದರ್ಭದಲ್ಲಿ ನೊಂದ ಕುಟುಂಬದ ಜೊತೆ ಸರ್ಕಾರ ಇದೆ ಈಶ್ವರ್ ಖಂಡ್ರೆ ಅವರು ಹೇಳಿದರು.

ಆನೆಗಳ ಸಮಸ್ಯೆ ಪರಿಹರಿಸಲು ಆನೆ ಧಾಮ ಮಾಡುವ ಬಗ್ಗೆ ಸರ್ಕಾರ ಯೋಜನೆ ರೂಪಿಸಿತ್ತು. ಅದಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಗುವಲ್ಲಿ ತೊಡಕಾಗಿದೆ. ಈ ಸಮಸ್ಯೆ ಪರಿಹರಿಸಿಕೊಂಡು ಆನೆ ಧಾಮ ನಿರ್ಮಾಣದ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.