ಕಾವೇರಿ ನದಿಯ ಸ್ವಚ್ಛತೆ, ನದಿ ತೀರದ ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ಕೊಡಗು ಅಭಿವೃದ್ಧಿ ಸಮಿತಿ ವತಿಯಿಂದ ಪ್ರತಿಭಟನೆ

Nov 26, 2025 - 16:50
 0  204
ಕಾವೇರಿ ನದಿಯ ಸ್ವಚ್ಛತೆ, ನದಿ ತೀರದ ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ಕೊಡಗು ಅಭಿವೃದ್ಧಿ ಸಮಿತಿ ವತಿಯಿಂದ ಪ್ರತಿಭಟನೆ

ಮಡಿಕೇರಿ: ಕಾವೇರಿ ನದಿಯ ಸ್ವಚ್ಛತೆ, ಕಾವೇರಿ ನದಿ ತೀರದ ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ಕೊಡಗು ಅಭಿವೃದ್ಧಿ ಸಮಿತಿ, ರೈತಮುಖಂಡರು, ರಕ್ಷಣಾ ವೇದಿಕೆ ಪದಾಧಿಕಾರಿಗಳು ಸೇರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಕೊಡಗು ಅಭಿವೃದ್ಧಿ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರಸನ್ನ ಭಟ್, ಕಾವೇರಿ ನದಿಯ ಸಂರಕ್ಷಣೆ ಮತ್ತು ಅದರ ಪ್ರವಾಹ ನಿರ್ವಹಣೆ ನಮ್ಮೆಲ್ಲರ ಹೊಣೆಯಾಗಿದೆ. ಕಾವೇರಿಯು ಕರ್ನಾಟಕ ರಾಜ್ಯದ ಜೀವನದಿಯಾಗಿದ್ದು, ಅನ್ನದಾತ ರೈತರ ಪಾಲಿಗೆ ವರದಾನವಾಗಿದೆ. ಇದು ನಮ್ಮರಾಜ್ಯದ ಸಾಮಾಜಿಕ, ಆರ್ಥಿಕ ಸ್ಥಿತಿಗೆ ಮಹತ್ವದ ಕೊಡುಗೆ ನೀಡುತ್ತದೆ. ಆದ್ದರಿಂದ ನದಿಯ ಸ್ವಚ್ಛತೆ, ಕಾವೇರಿ ನದಿ ತೀರದ ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ ಎಂದರು.

 ಪ್ರತಿಭಟನೆಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಕೊಡಗು ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ರೈತಮುಖಂಡರು, ರಕ್ಷಣಾ ವೇದಿಕೆ ಪದಾಧಿಕಾರಿಗಳು ಇದ್ದರು.

What's Your Reaction?

Like Like 0
Dislike Dislike 1
Love Love 0
Funny Funny 0
Angry Angry 0
Sad Sad 0
Wow Wow 0