ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಬಿ.ಎ. ಷಂಶುದ್ದೀನ್ ಮಡಿಕೇರಿ ಆಯ್ಕೆ
ಮಡಿಕೇರಿ; ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡುಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್‌ನ ಸಹಯೋಗದೊಂದಿಗೆ ಏಪ್ರಿಲ್ 28ರಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಹಮ್ಮಿಕೊಂಡಿರುವ ಕೊಡಗು ಜಿಲ್ಲಾ ಮೊದಲ ಬ್ಯಾರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ, ಪತ್ರಕರ್ತ, ಕವಿ ಬಿ.ಎ. ಶಂಷುದ್ದೀನ್ ಮಡಿಕೇರಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್. ತಿಳಿಸಿದ್ದಾರೆ.