ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶಾಸಕದ್ವಯರ ನೇತೃತ್ವದಲ್ಲಿ ಸಿ& ಡಿ ಜಾಗದ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರ ಭೇಟಿ

ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶಾಸಕದ್ವಯರ ನೇತೃತ್ವದಲ್ಲಿ ಸಿ& ಡಿ ಜಾಗದ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರ ಭೇಟಿ

ಬೆಂಗಳೂರು;ಸಿ&ಡಿ ಜಾಗದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕದ್ವಯರಾದ ಎ ಎಸ್ ಪೊನ್ನಣ್ಣ ಮತ್ತು ಡಾ.ಮಂತರ್ ಗೌಡ ರವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಗೃಹ ಕಛೇರಿ ಕಾವೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಜಿಲ್ಲಾ ಕಾಂಗ್ರೆಸ್ ನಿಯೋಗದ ಅಹವಾಲುಗಳನ್ನು ಆಲಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಒಂದು ವಾರದೊಳಗೆ ಅಧ್ಯಯನ ಕಮಿಟಿ ರಚನೆ ಮಾಡಲಾಗುವುದು. ಹಾಗೂ ಈ ಕಮಿಟಿ ಜಿಲ್ಲೆಗೆ ಭೇಟಿ ನೀಡಿ ರೈತರು ಹಾಗೂ ಅಧಿಕಾರಿಗಳಿಂದ ಸೂಕ್ತ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ನೀಡಲಿದ್ದು ರೈತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ನಿಯೋಗಕ್ಕೆ ಮುಖ್ಯಮಂತ್ರಿಗಳು ಅಭಯ ನೀಡಿದರು.

 ಈ ಭೇಟಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಉಪಾಧ್ಯಕ್ಷ ಕೆ ಎಂ ಲೋಕೇಶ್, ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಸದಸ್ಯೆ ಕೆ ಪಿ ಚಂದ್ರಕಲಾ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ ಬಿ ಸತೀಶ್, ಕಾಂಗ್ರೆಸ್ ಮುಖಂಡರಾದ ನಂದಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ ಎಲ್ ಜನಾರ್ಧನ್,ಡಿಸಿಸಿ ಸದಸ್ಯ ಲಾರೆನ್ಸ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಖಜಾಂಜಿ ಚೇತನ್, ಸೋಮವಾರಪೇಟೆ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಡಿ ಯು, ಕಾಂಗ್ರೆಸ್ ಮುಖಂಡರಾದ ಹಣಕೋಡು ಸುರೇಶ್, ಜೆ ಆರ್ ಪಾಲಾಕ್ಷ, ವೀರೇಂದ್ರ, ರವರು ಉಪಸ್ಥಿತರಿದ್ದರು.