ಕೊಡಗು ಜಿಲ್ಲಾ ಕಾಂಗ್ರೆಸ್ OBC ವಿಭಾಗದ ಸಭೆ

ಮಡಿಕೇರಿ:ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ವತಿಯಿಂದ ಆಯೋಜನೆಗೊಂಡ, ಕೊಡಗು ಜಿಲ್ಲೆ ಹಿಂದುಳಿದ ವರ್ಗಗಳ ಸಭೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸ ರಾಜು ರವರೊಂದಿಗೆ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ,ಶಾಸಕ ಡಾ.ಮಂತರ್ ಗೌಡ ಅವರು ಭಾಗವಹಿಸಿದ್ದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಬಾನಂಡ ಪೃಥ್ವಿ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯರು ಅರುಣ್ ಮಾಚಯ್ಯ, ಬೇಕಲ್ ರಮಾನಾಥ್,ತೆನಿರ ಮೈನಾ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಜಮ್ಮಡ ಸೋಮಣ್ಣ, ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕೊಡಗು ಜಿಲ್ಲೆಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು/ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ವಲಯ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕ/ಸೆಲ್ ಗಳ ಅಧ್ಯಕ್ಷರುಗಳು, ಡಿಸಿಸಿ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಸರಕಾರ ನಾಮನಿರ್ದೇಶಿತ ಅಧ್ಯಕ್ಷರುಗಳು/ಸದಸ್ಯರು, ಪಕ್ಷದ ಎಲ್ಲಾ ಪದಾಧಿಕಾರಿಗಳು, ಹಿಂದುಳಿದ ವರ್ಗಗಳ ಘಟಕದ ಎಲ್ಲಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಸಮಾಜದ ಎಲ್ಲಾ ಬಾಂಧವರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.