Kodagu

ಕೊಡಗು ಜಿಲ್ಲಾ‌‌ ಕಾಂಗ್ರೆಸ್ ವತಿಯಿಂದ "ಮತ ಕಳ್ಳತನ" ಸಹಿ ಅಭಿಯಾನ

admincoorgdaily

ಮಡಿಕೇರಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡ 'ಮತ ಕಳ್ಳತನ ನಿಲ್ಲಿಸಿ' ಸಹಿ ಅಭಿಯಾನದ ಕುರಿತು ಕಾರ್ಯಕ್ರಮದಲ್ಲಿ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಹಾಗೂ ಶಾಸಕ ಡಾ.ಮಂತರ್ ಅವರು ಭಾಗವಹಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪ್ರಮುಖರು ಭಾಗವಹಿಸಿದರು. ಮೊದಲಿಗೆ, ನೂತನ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯರವರನ್ನು ಸನ್ಮಾನಿಸಲಾಯಿತು.

ಬಳಿಕ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸೂಚನೆಯಂತೆ ದೇಶಾದ್ಯಂತ ನಡೆಯುತ್ತಿರುವ ಮತ ಕಳ್ಳತನದ (ವೋಟ್ ಚೋರಿ) ವಿರುದ್ಧ ಸಹಿ ಸಂಗ್ರಹ ಅಭಿಯಾನದ ಭಾಗವಾಗಿ ಕೊಡಗು ಜಿಲ್ಲೆಯಲ್ಲಿ ಸಹಿ ಸಂಗ್ರಹಿಸುವ ಕಾರ್ಯಕ್ರಮಕ್ಕೆ ಎ.ಎಸ್ ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರು ಇತರ ಗಣ್ಯರೊಂದಿಗೆ, ಇಂದಿರಾಗಾಂಧಿ ವೃತ್ತದಲ್ಲಿ ಅಳವಡಿಸಿದ ಸಹಿ ಸಂಗ್ರಹ ಫಲಕಕ್ಕೆ ಹಸ್ತಾಕ್ಷರ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು/ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು/ಪದಾಧಿಕಾರಿಗಳು, ಮುಂಚೂಣಿ ಘಟಕ/ಸೆಲ್ ಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಡಿಸಿಸಿ ಪದಾಧಿಕಾರಿಗಳು, ಸರಕಾರಿ ನಾಮನಿರ್ದೇಶಿಕ ಅಧ್ಯಕ್ಷರುಗಳು/ಸದಸ್ಯರುಗಳು, ಚುನಾಯಿತ ಜನಪ್ರತಿನಿಧಿಗಳು, ವಲಯ ಹಾಗೂ ಬ್ಲಾಕ್ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.