Kodagu

ಎಸ್ಐಆರ್ ಕುರಿತು ಮೈಸೂರಿನಲ್ಲಿ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ನಾಯಕರು

admincoorgdaily

ಎಸ್ಐಆರ್ ಕುರಿತು ಮೈಸೂರಿನಲ್ಲಿ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ನಾಯಕರು

ಮೈಸೂರು;ಮತದಾರ ಪಟ್ಟಿ ಪರಿಷ್ಕರಣೆ (ಎಸ್ಐಆರ್), ಕುರಿತು ಗೊಂದಲ ನಿವಾರಣೆಗೆ ಹಾಗೂ ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಸಲುವಾಗಿ ಮೈಸೂರಿನ ಜೆಪಿ ಪ್ಯಾಲೇಸ್ ಸಭಾಂಗಣದಲ್ಲಿ ಕೆಪಿಸಿಸಿ ವತಿಯಿಂದ ವಿಶೇಷ ಮಾಹಿತಿ ಕಾರ್ಯಗಾರ ಏರ್ಪಡಿಸಲಾಗಿತ್ತು. ಕೊಡಗು ಜಿಲ್ಲೆಯಿಂದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ ರವರ ನೇತೃತ್ವದಲ್ಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಪಕ್ಷದ ಆಹ್ವಾನಿತ ಪ್ರಮುಖರು ಭಾಗವಹಿಸಿ ಮಾಹಿತಿ ಪಡೆದುಕೊಂಡರು.